ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಜಾಗತಿಕ ಮಾರುಕಟ್ಟೆಯಲ್ಲಿ ತೈಲ ಬೆಲೆ ಏರಿಕೆ: ದೇಶದಲ್ಲೂ ಶೀಘ್ರದಲ್ಲೇ ಪೆಟ್ರೋಲ್, ಡೀಸೆಲ್, ಎಲ್‌ಪಿಜಿ ದರ ಹೆಚ್ಚಳ ಸಾಧ್ಯತೆ

ಪಶ್ಚಿಮ ಏಷ್ಯಾದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯಿಂದ ಜಾಗತಿಕ ಕಚ್ಚಾ ತೈಲ ಬೆಲೆ ಏರಿಕೆಯಾಗಿದ್ದು, ಇದರ ಪರಿಣಾಮವಾಗಿ ಭಾರತದಲ್ಲಿ ಪೆಟ್ರೋಲ್, ಡೀಸೆಲ್ ಮತ್ತು ಎಲ್‌ಪಿಜಿ ದರಗಳು ಶೀಘ್ರದಲ್ಲೇ ಹೆಚ್ಚಾಗುವ ಸಾಧ್ಯತೆ ಇದೆ. ಪ್ರತಿ ಲೀಟರ್‌ಗೆ 4-5 ರುಪಾಯಿ ಮತ್ತು ಎಲ್‌ಪಿಜಿ ಸಿಲಿಂಡರ್‌ಗೆ 40-50 ರುಪಾಯಿ ಹೆಚ್ಚಳ ಸಾಧ್ಯತೆ ಇದೆ. ಕೇಂದ್ರ ಸರ್ಕಾರ ಮುಂದಿನ ಒಂದು ವಾರದಲ್ಲಿ ಅಂತಿಮ ನಿರ್ಧಾರ ಕೈಗೊಳ್ಳಲಿದೆ.

ಭಾರತದಲ್ಲಿ ಪೆಟ್ರೋಲ್, ಡೀಸೆಲ್, LPG ಬೆಲೆ ಏರಿಕೆ ಸಾಧ್ಯತೆ

ಎಐ ಚಿತ್ರ -

Profile
Sushmitha Jain May 2, 2026 5:27 PM

ನವದೆಹಲಿ, ಮೇ 2: ಪಶ್ಚಿಮ ಏಷ್ಯಾ (West Asia) ವಲಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯಿಂದಾಗಿ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ (Global Crude Oil Costs) ಏರಿಕೆಯಾಗುತ್ತಿದ್ದು, ಇದರ ಬೆನ್ನಲ್ಲೇ ಭಾರತದಲ್ಲಿ ಪೆಟ್ರೋಲ್, ಡೀಸೆಲ್ ಮತ್ತು ಎಲ್‌ಪಿಜಿ ಸಿಲಿಂಡರ್ ದರಗಳು ಶೀಘ್ರದಲ್ಲೇ ಏರಿಕೆಯಾಗುವ ಸಾಧ್ಯತೆಯಿದೆ ಎಂದು ಸರ್ಕಾರದ ಉನ್ನತ ಮೂಲಗಳು ತಿಳಿಸಿವೆ. ಮುಂದಿನ ಒಂದು ವಾರದೊಳಗೆ ಈ ಕುರಿತು ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಳ್ಳುವ ನಿರೀಕ್ಷೆಯಿದೆ.

ವರದಿಗಳ ಪ್ರಕಾರ, ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ ಸುಮಾರು 4ರಿಂದ 5 ರುಪಾಯಿಗಳಷ್ಟು ಹೆಚ್ಚಾಗಬಹುದು. ಹಾಗೆಯೇ, ಗೃಹ ಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಸುಮಾರು 40ರಿಂದ 50 ರುಪಾಯಿಯಷ್ಟು ಏರಿಕೆಯಾಗುವ ಸಾಧ್ಯತೆಯಿದೆ. ಒಂದು ವೇಳೆ ಸರ್ಕಾರ ಈ ಪ್ರಸ್ತಾವನೆಗೆ ಅನುಮೋದನೆ ನೀಡಿದರೆ, ಇದು ಕಳೆದ 4 ವರ್ಷಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಕಂಡುಬರುವ ಮೊದಲ ಏರಿಕೆಯಾಗಲಿದೆ. ತೈಲ ಕಂಪನಿಗಳ ಮೇಲಿನ ಆರ್ಥಿಕ ಒತ್ತಡವನ್ನು ಕಡಿಮೆ ಮಾಡುವುದು ಮತ್ತು ಹಣದುಬ್ಬರ ನಿಯಂತ್ರಣದಲ್ಲಿಡುವುದು ಈ ಎರಡರ ನಡುವೆ ಸಮತೋಲನ ಕಾಯ್ದುಕೊಳ್ಳಲು ಸರ್ಕಾರ ಪ್ರಯತ್ನಿಸುತ್ತಿದೆ.

ದೇಶದಲ್ಲಿ ಇಂಧನ ಬೆಲೆ ಏರಿಕೆ ಸಾಧ್ಯತೆ:



ಕಚ್ಚಾ ತೈಲ ದರ ಏರಿಕೆ: ಸ್ಟಾಕ್ ಮಾರ್ಕೆಟ್ ಮೇಲೆ ಏನು ಪರಿಣಾಮ?

ಹಿಂದೆ ಬೆಲೆ ಏರಿಕೆಯ ವರದಿಗಳನ್ನು 'ಸುಳ್ಳು ಸುದ್ದಿ' ಎಂದು ತಳ್ಳಿಹಾಕಿದ್ದ ಪೆಟ್ರೋಲಿಯಂ ಸಚಿವಾಲಯವು, ಅಂತಹ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ ಎಂದು ಹೇಳಿತ್ತು. ಆದರೆ ಪ್ರಸ್ತುತ ತೈಲ ಕಂಪನಿಗಳು ಪೆಟ್ರೋಲ್ ಮೇಲೆ ಪ್ರತಿ ಲೀಟರ್‌ಗೆ 20 ರುಪಾಯಿ ಹಾಗೂ ಡೀಸೆಲ್ ಮೇಲೆ ದೊಡ್ಡ ಮಟ್ಟದ ನಷ್ಟ ಅನುಭವಿಸುತ್ತಿವೆ ಎಂದು ಮೂಲಗಳು ತಿಳಿಸಿವೆ.

ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದೇನು?

ಕೇಂದ್ರ ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ ಮಾತನಾಡಿ, "ಕಳೆದ ದಶಕದಲ್ಲಿ ಸರ್ಕಾರ ಕೈಗೊಂಡ ಸಿದ್ಧತೆಗಳಿಂದಾಗಿ ಇಂಧನ ಬಿಕ್ಕಟ್ಟನ್ನು ಸಮರ್ಥವಾಗಿ ಎದುರಿಸಲಾಗುತ್ತಿದೆ. ನಾವು ತೈಲ ಆಮದು ಮಾಡಿಕೊಳ್ಳುವ ದೇಶಗಳ ಸಂಖ್ಯೆಯನ್ನು 27ರಿಂದ 41ಕ್ಕೆ ಹೆಚ್ಚಿಸಿದ್ದೇವೆ. ಅಲ್ಲದೆ ಅಮೆರಿಕ, ನಾರ್ವೆ ಮತ್ತು ಅಲ್ಜೀರಿಯಾಗಳಿಂದಲೂ ಎಲ್‌ಪಿಜಿ ಆಮದು ಮಾಡಿಕೊಳ್ಳುತ್ತಿದ್ದೇವೆ" ಎಂದು ವಿವರಿಸಿದ್ದಾರೆ.

ತೈಲ ಬೆಲೆ ಏರಿಕೆಯ ಹೊರೆ ನೇರವಾಗಿ ಗ್ರಾಹಕರ ಮೇಲೆ ಬೀಳದಂತೆ ಸರ್ಕಾರ ಅಬಕಾರಿ ಸುಂಕ ಕಡಿತದಂತಹ ಕ್ರಮಗಳನ್ನು ಕೈಗೊಂಡಿದೆ. ಆದರೂ ಜಾಗತಿಕ ಮಾರುಕಟ್ಟೆಯ ಏರಿಳಿತಗಳು ಈಗ ಬೆಲೆ ಪರಿಷ್ಕರೆ ಅನಿವಾರ್ಯವಾಗುವಂತೆ ಮಾಡಿವೆ. ಪ್ರಸ್ತುತ ದೆಹಲಿಯಲ್ಲಿ ಪೆಟ್ರೋಲ್ ಬೆಲೆ 94.77 ರುಪಾಯಿ ಹಾಗೂ ಡೀಸೆಲ್ ಬೆಲೆ 87.67 ರುಪಾಯಿ ಇದೆ. ಬೆಲೆ ಏರಿಕೆಯ ಅಂತಿಮ ತೀರ್ಮಾನವು ಮುಂದಿನ 5ರಿಂದ 7 ದಿನಗಳಲ್ಲಿ ಹೊರ ಬೀಳಲಿದೆ ಎಂದು ಮೂಲಗಳು ತಿಳಿಸಿವೆ.