Friday, 7th October 2022

ಕಲ್ಯಾಣ ಕರ್ನಾಟಕದ ಸರ್ವಾಂಗೀಣ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ದ: ಮುಖ್ಯಮಂತ್ರಿ

ಕಲಬುರಗಿ: ಕೃಷಿ, ನೀರಾವರಿ, ಆರೋಗ್ಯ, ಶಿಕ್ಷಣ ಸೇರಿದಂತೆ ಕಲ್ಯಾಣ ಕರ್ನಾಟಕದ ಸರ್ವಾಂಗೀಣ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ದವಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.

ಕಲ್ಯಾಣ ಕರ್ನಾಟಕ ಉತ್ಸವ ಹಿನ್ನಲೆ ನಗರದ ಎಸ್‍ವಿಪಿ ವೃತ್ತದಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ ಪುತ್ಥಳಿಗೆ ಪೂಜೆ ಸಲ್ಲಿಸಿ, ಡಿಎಆರ್ ಮೈದಾನದಲ್ಲಿ ಧ್ವಜರೋಹಣ ನೇರವೇರಿಸಿ ಮಾತನಾಡಿದರು.

ಹೈದರಾಬಾದ್ ಕರ್ನಾಟಕವನ್ನು ಇಲ್ಲಿನ ಜನತೆಯ ಒತ್ತಾಸೆಯಂತೆ ಕಲ್ಯಾಣ ಕರ್ನಾಟಕವೆಂದು ನಾಮಕರಣ ಮಾಡಿದ್ದೇವೆ. ಈ ಭಾಗದ ಅಭಿವೃದ್ಧಿಗೆ ನಮ್ಮ ಸರ್ಕಾರ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಹಂತ ಹಂತವಾಗಿ ಅನುಷ್ಠಾನ ಮಾಡ ಲಿದೆ ಎಂದು ತಿಳಿಸಿದರು.

ಈ ಭಾಗದ 6 ಜಿಲ್ಲೆಗಳನ್ನು ಯಾವ ಯಾವ ಕ್ಷೇತ್ರದಲ್ಲಿ ಹಿಂದುಳಿದಿದೆಯೋ ಅದಕ್ಕೆ ವಿಶೇಷ ಒತ್ತು ನೀಡಲಾಗುವುದು. ಬಜೆಟ್‍ನಲ್ಲಿ ಈ ಭಾಗಕ್ಕೆ ಅನೇಕ ಯೋಜನೆಗಳನ್ನು ಘೋಷಣೆ ಮಾಡಿದ್ದೇನೆ. ಕಾಲ ಮಿತಿಯೊಳಗೆ ಇವುಗಳನ್ನು ಅನುಷ್ಠಾನ ಮಾಡಲಾಗುವುದು ಎಂದರು.

ಜಯದೇವ ಹೃದ್ರೋಗ ಸಂಸ್ಥೆಯಿಂದ ಸುಮಾರು 350 ಕೋಟಿ ರೂ. ವೆಚ್ಚದ 300 ಹಾಸಿಗೆ ಸಾಮಥ್ರ್ಯವುಳ್ಳ ಆಸ್ಪತ್ರೆಗೆ ಶಂಕು ಸ್ಥಾಪನೆ ನೆರವೇರಿಸಲಾಗಿದೆ. ಹೃದ್ರೋಗ ಕಾಯಿಲೆಗಳಿಗೆ ದೂರದ ಬೆಂಗಳೂರಿಗೆ ಬರುವುದು ತಪ್ಪತ್ತದೆ ಎಂದು ಅಭಿಪ್ರಾಯ ಪಟ್ಟರು.

ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಮಾದರಿಯಲ್ಲೇ ಬಸವ ಕಲ್ಯಾಣ ಪ್ರಾಧಿಕಾರದ ಮೂಲಕ ಅನುಭವ ಮಂಟಪ ಕೆಲಸಕ್ಕೆ ಶೀಘ್ರದಲ್ಲೇ ಚಾಲನೆ ಕೊಡಲಾಗುವುದು. ಇದರಿಂದಲೂ ಈ ಭಾಗಕ್ಕೆ ಇನ್ನು ಹೆಚ್ಚಿನ ಅನುಕೂಲ ಸಿಗಲಿದೆ ಎಂದು ತಿಳಿಸಿದರು. ಮಳೆಯ ನಡುವೆ ಕಲ್ಯಾಣ ಕರ್ನಾಟಕ ಉತ್ಸವ ಯಶಸ್ವಿಯಾಗಿದೆ. ಕಲ್ಯಾಣ ಕರ್ನಾಟಕ ಅಭಿವೃದ್ಧಿಗಾಗಿ ಏನೇನು ಕಾರ್ಯಕ್ರಮ ರೂಪಿಸಬೇಕು ಅದಕ್ಕೆ ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು.

ಇನ್ನು ಕಾರ್ಯಕ್ರಮದಲ್ಲಿ ಡಿಸಿಎಂ ಗೋವಿಂದ್ ಕಾರಜೋಳ, ಸಂಸದ ಉಮೇಶ್ ಜÁದವ್, ಸಚಿವ ಆರ್.ಅಶೋಕ್, ಶಾಸಕ ದತ್ತಾತ್ರೇಯ ಪಾಟೀಲ್ ರೆವೂರ್, ಬಾಬುರಾವ್ ಚಿಂಚನಸೂರ್ ಸೇರಿದಂತೆ ಹಲವರು ಕಲ್ಯಾಣ ಕರ್ನಾಟಕದ ಉತ್ಸವದಲ್ಲಿ ಭಾಗಿಯಾಗಿದ್ದರು.