Monday, 8th March 2021

ಮೃತರ ಕುಟುಂಬಗಳಿಗೆ ಐದು ಲಕ್ಷ ರೂಪಾಯಿ ಪರಿಹಾರ: ಸಚಿವ ಬಸವರಾಜ್ ಬೊಮ್ಮಾಯಿ

ಬೆಂಗಳೂರು: ಚಿಕ್ಕಬಳ್ಳಾಪುರ ಜಿಲ್ಲೆ ಗುಡಿಬಂಡೆ ತಾಲ್ಲೂಕಿನ ಹಿರೇನಾಗವಲ್ಲಿಯಲ್ಲಿ ಸಂಭವಿಸಿದ ಘಟನೆಯಲ್ಲಿ ಮೃತಪಟ್ಟ ಕುಟುಂಬಗಳಿಗೆ ಐದು ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.

ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಮೃತರ ಕುಟುಂಬಗಳಿಗೆ ಸರ್ಕಾರದ ವತಿಯಿಂದ ತಲಾ 5 ಲಕ್ಷ ಪರಿಹಾರ ನೀಡಲಾಗುವುದು ಹಾಗು ಪ್ರಕರಣವನ್ನು ಸಿಐಡಿ ಮೂಲಕ ತನಿಖೆ ಮಾಡಿಸುವುದಾಗಿ ಹೇಳಿದರು.

ಘಟನೆಯಲ್ಲಿ ಯಾರೇ ಭಾಗಿಯಾಗಿದ್ದರೂ ಅವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಜರುಗಿಸಲಾಗುವುದು. ಕ್ರಷರ್ ಮಾಲೀಕರು ತಲೆಮರೆಸಿಕೊಂಡಿದ್ದಾರೆ ಎಂಬ ಮಾಹಿತಿ ಇದೆ. ಅವರ ಬಂಧನಕ್ಕಾಗಿ ವಿಶೇಷ ತಂಡ ರಚನೆ ಮಾಡಿರುವುದಾಗಿ ಹೇಳಿದರು.

ಇದಕ್ಕೂ ಮುನ್ನ ಬೆಳಗ್ಗೆ ಬೆಂಗಳೂರಿನಿಂದ ಘಟನಾ ಸ್ಥಳಕ್ಕೆ ಆಗಮಿಸಿದ ಸಚಿವ ಬೊಮ್ಮಾಯಿ ಅವರು ಚಿಕ್ಕಬಳ್ಳಾಪುರ ಜಿಲ್ಲಾಧಿ ಕಾರಿ ಲತಾ, ಕೇಂದ್ರ ವಲಯ ಐಜಿಪಿ ಚಂದ್ರಶೇಖರ್, ಜಿಲ್ಲಾ ಪೊಲೀಸ್ ವರಿಷ್ಠಾಕಾರಿ ಮಿಥುನ್, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಕಾರಿಗಳ ವಿರುದ್ಧ ಸಿಡಿಮಿಡಿಗೊಂಡರು.

ಸ್ಪೋಟಕಗಳು ಸಂಗ್ರಹಿಸಿಟ್ಟಿರುವ ಬಗ್ಗೆ ಮಾಹಿತಿ ಇರಲಿಲ್ಲವೇ? ಕಲ್ಲು ಗಣಿಗಾರಿಕೆ ನಡೆಯುತ್ತಿರುವ ಪ್ರದೇಶದಲ್ಲಿ ಕಾನೂನು ಬಾಹಿರ ಚಟುವಟಿಕೆಗಳು ಜರುಗುತ್ತಿರುವ ಮಾಹಿತಿಯೂ ಗಮನಕ್ಕೆ ಬಂದಿರಲಿಲ್ಲವೇ? ಎಂದು ಪ್ರಶ್ನಿಸಿದರು.

 

Leave a Reply

Your email address will not be published. Required fields are marked *