Thursday, 3rd December 2020

ಪ್ರಜ್ಞಾವಂತರ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಗೆಲುವು ನಿಶ್ಚಿತ: ಹೆಚ್.ಕೆ.ಪಿ ಆಶಾವಾದ

ಹುಬ್ಬಳ್ಳಿ: ಪಶ್ಚಿಮ ಪದವೀಧರರ ಕ್ಷೇತ್ರ ಅತ್ಯಂತ ಪ್ರಜ್ಞಾವಂತರ ಕ್ಷೇತ್ರ. ಕಾಂಗ್ರೆಸ್ ಪಕ್ಷದಿಂದ ಆರ್.ಎಂ ಕುಬೇರಪ್ಪ ಅವರು ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ. ಶಿಕ್ಷಕರ ಸಮಸ್ಯೆಗಳನ್ನ ಬಗೆಹರಿಸಲು ಯೋಗ್ಯ ಅಭ್ಯರ್ಥಿಯಾಗಿದ್ದಾರೆ. ಈ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆಲುವು ನಿಶ್ಚಿತ ಎಂದು ಹುಬ್ಬಳ್ಳಿಯಲ್ಲಿ ಮಾಜಿ ಸಚಿವ ಎಚ್.ಕೆ.ಪಾಟೀಲ್ ಸುದ್ದಿಗೋಷ್ಠಿ ನಡೆಸಿ ಹೇಳಿಕೆ ನೀಡಿ ದರು.

ಇದೇ 28 ರಂದು ನಡೆಯಲಿರುವ ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ಕ್ಷೇತ್ರದ ನಾಲ್ಕೂ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಂಡಿದ್ದೇನೆ. ಪದವೀಧರರ ಹಾಗೂ ಪ್ರಜ್ಞಾವಂತರ ಅಭಿಪ್ರಾಯವನ್ನ ಸಂಗ್ರಹ ಮಾಡಿದ್ದೇವೆ ಎಂದರು.

ಕೇಂದ್ರ ಸರ್ಕಾರದ 2 ಕೋಟಿ ಉದ್ಯೋಗಾವಕಾಶ ಭರವಸೆ ಎಲ್ಲಿ ಹೋಯ್ತು ? ಕೇಂದ್ರ ಸರ್ಕಾರದ ಹುಸಿ ಭರವಸೆಗಳು ಜನ ಸಾಮಾನ್ಯರಲ್ಲಿ ಬೇಸರ ತರಿಸಿದೆ. ಜನರಲ್ಲಿ ಕೇಂದ್ರ ಸರ್ಕಾರದ ಬಗ್ಗೆ ಇರುವ ಆಶಾಭಾವನೆ ಹೋಗಿದೆ. ದೇಶದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಕಾಂಗ್ರೆಸ್ ಪಕ್ಷದ ಬಗ್ಗೆ ಜನತೆಯಲ್ಲಿ ಒಲವು ಜಾಸ್ತಿಯಾಗುತ್ತಿದೆ ಎಂದು ಹೇಳಿದರು.

ರಾಜ್ಯದಲ್ಲಿ ಪ್ರವಾಹದಿಂದ ಸಾಕಷ್ಟು ಹಾನಿಯಾಗಿದೆ. ಪ್ರವಾಹದಿಂದ ಸಾವಿರಾರು ಸಂಖ್ಯೆಯ ಜನ ಸಂಕಷ್ಟ ಅನುಭವಿಸು ತ್ತಿದ್ದಾರೆ. ನಿರಾಶ್ರಿತ ಕೇಂದ್ರಗಳಲ್ಲಿ ಸರಿಯಾದ ಸೌಲಭ್ಯ ಸಿಗುತ್ತಿಲ್ಲ. ಮಳೆಯಿಂದಾಗಿ 40 ಸಾವಿರ ಕೋಟಿ ಪ್ರಮಾಣದಲ್ಲಿ ಬೆಳೆ ಹಾನಿಯುಂಟಾಗಿದೆ. ಕಳೆದ ಬಾರಿ ಸಂಭವಿಸಿದ ನೆರೆ ಹಾವಳಿಯಿಂದ ಇನ್ನೂ ಚೇತರಿಕೆಯಾಗಿಲ್ಲ. ರಾಜ್ಯದ ಅನೇಕ ಕುಟುಂಬ ಗಳಿಗೆ ಇನ್ನೂ ಸಮರ್ಪಕ ಪರಿಹಾರ ಒದಗಿಸಿಲ್ಲ. ಮುಂಬೈ ಹಾಗೂ ಕಲ್ಯಾಣ ಕರ್ನಾಟಕ ಭಾಗದ ರೈತರ ಬದುಕು ಅಸ್ತವ್ಯಸ್ತ ವಾಗಿದೆ. ರೈತರಿಗೆ ಹಾಗೂ ನಿರಾಶ್ರಿತರಿಗೆ ರಾಜ್ಯ ಸರ್ಕಾರದಿಂದ ಸರಿಯಾದ ಸ್ಪಂದನೆ ಸಿಗುತ್ತಿಲ್ಲ ಎಂದು ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.

ಇದೇ ವೇಳೆ, ಸಂಕಷ್ಟ ಅನುಭವಿಸುತ್ತಿರುವ ಜನತೆಗೆ ಸರ್ಕಾರ ಸಮರ್ಪಕ‌ ಸ್ಪಂದನೆ ನೀಡಬೇಕು. ಸರ್ಕಾರ ಶೀಘ್ರವೇ ಸಮರ್ಪಕ ಪರಿಹಾರವನ್ನ ಬಿಡುಗಡೆಗೊಳಿಸಬೇಕು ಎಂದು ಆಗ್ರಹಿಸಿದರು.

 

Leave a Reply

Your email address will not be published. Required fields are marked *