Wednesday, 29th June 2022

ಸಂಸದ ಡಿ.ಕೆ.ಸುರೇಶ್’ಗೆ ಕೊರೊನಾ ದೃಢ

ರಾಮನಗರ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಸಹೋದರ ಹಾಗೂ ಸಂಸದ ಡಿ.ಕೆ.ಸುರೇಶ್ ಅವರಿಗೆ ಕೊರೋನಾ ಸೋಂಕು ದೃಢವಾಗಿದೆ.

ಈ ಕುರಿತು ಟ್ವಟರ್‌’ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಕೊರೋನಾ ಪರೀಕ್ಷೆಯಲ್ಲಿ ನನಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಸಧ್ಯಕ್ಕೆ ನನ್ನ ಆರೋಗ್ಯ ಸ್ಥಿರವಾಗಿದೆ ಹಾಗೂ ಸುರಕ್ಷಿತವಾಗಿ ಇದ್ದೇನೆ. ಕೆಲವು ದಿನಗಳಿಂದ ನನ್ನ ಸಂಪರ್ಕದಲ್ಲಿ ಇದ್ದ ಸ್ನೇಹಿತರು, ಬಂಧುಗಳು ಹಾಗೂ ನನ್ನ ಜೊತೆಗೆ ಇದ್ದ CBI ಅಧಿಕಾರಿಗಳು, ಮಾಧ್ಯಮ ಮಿತ್ರರಿಗೆ ಕೊರೋನಾ ಪರೀಕ್ಷೆ ಮಾಡಿಸಿಕೊಳ್ಳಲು ವಿನಂತಿಸಿಕೊಳ್ಳು ತ್ತೇನೆ ಎಂದಿದ್ದಾರೆ.