Wednesday, 5th October 2022

ಸಚಿವ ಪ್ರಹ್ಲಾದ್ ಜೋಶಿಗೆ ಕೊರೊನಾ ಸೋಂಕು ದೃಢ

ನವದೆಹಲಿ: ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

ಕರ್ನಾಟಕದ ಸಂಸದರಾಗಿರುವ ಪ್ರಹ್ಲಾದ್ ಜೋಶಿ ಸ್ವತಃ ಈ ವಿಷಯ ತಿಳಿಸಿದ್ದು, ಮುನ್ನೆಚ್ಚರಿಕಾ ಕ್ರಮ ವಾಗಿ ಹೋಂ ಕ್ವಾರಂಟೈನ್ ಗೆ ಒಳಗಾಗುವುದಾಗಿ ತಿಳಿಸಿದ್ದಾರೆ.

ಈಗಾಗಲೇ ಕೇಂದ್ರ ಸಚಿವರಾದ ಅಮಿತ್ ಶಾ, ನಿತಿನ್ ಗಡ್ಕರಿ ಸೇರಿದಂತೆ ಹಲವಾರು ಸಚಿವರು ಕೊರೊನಾ ಸೋಂಕಿಗೆ ಒಳಗಾಗಿದ್ದು, ಗುಣಮುಖರಾಗಿದ್ದಾರೆ. ಕರ್ನಾಟಕದ ಮತ್ತೊಬ್ಬ ಸಚಿವ ಸುರೇಶ್ ಅಂಗಡಿ ಕೊರೊನಾ ಸೋಂಕಿಗೆ ಬಲಿಯಾಗಿದ್ದರು.