Wednesday, 5th October 2022

ನಾಲ್ವರು ವಿದ್ಯಾರ್ಥಿಗಳಿಗೆ ಕೊರೊನಾ ವೈರಸ್ ಸೋಂಕು ದೃಢ

ಬೆಂಗಳೂರು : ರಾಜ್ಯದಲ್ಲಿ ಶಾಲಾ-ಕಾಲೇಜು ಆರಂಭದ ಕುರಿತಂತೆ ಚರ್ಚೆ ನಡೆಯುತ್ತಿರುವ ಹೊತ್ತಲ್ಲೇ ವಿದ್ಯಾಗಮ ಯೋಜನೆ ಯಡಿ ವಠಾರ ಶಾಲೆಯಲ್ಲಿ ಪಾಠ ಮಾಡುತ್ತಿದ್ದ ಶಿಕ್ಷಕರೊಬ್ಬರಿಗೆ ಕೊರೊನಾ ವೈರಸ್ ಸೋಂಕು ತಗುಲಿದ ಬಳಿಕ ನಾಲ್ಕು ಮಕ್ಕಳಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ.

ಶಾಲಾ-ಕಾಲೇಜು ಆರಂಭ ಮಾಡಬೇಕೇ, ಬೇಡವೇ? ಎಂಬ ಬಗ್ಗೆ ಪರ ವಿರೋಧಗಳು ವ್ಯಕ್ತವಾಗುತ್ತಿರುವ ಹೊತ್ತಲ್ಲೇ ವಠಾರ ಶಾಲೆಯ ನಾಲ್ವರು ವಿದ್ಯಾರ್ಥಿಗಳಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ.

20 ದಿನಗಳ ಹಿಂದೆ ಮಾಶಾಳ ಸರ್ಕಾರಿ ಮಾದರಿ ಪ್ರಾಥಮಿಕ ಶಾಳೆಯ ಮುಖ್ಯ ಶಿಕ್ಷಕರಿಗೆ ಕೊರೊನಾ ವೈರಸ್ ಸೋಂಕು ದೃಢ ಪಟ್ಟಿತ್ತು. ಶಾಲೆಯ 20 ಶಿಕ್ಷಕರ ಕೋವಿಡ್ ಟೆಸ್ಟ್ ನಡೆಸಲಾಗಿದ್ದು, ಎಲ್ಲರ ವರದಿಯೂ ನೆಗೆಟಿವ್ ಬಂದಿದೆ. ಜೊತೆಗೆ ಶಾಲೆಯ 207 ವಿದ್ಯಾರ್ಥಿಗಳಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ನಾಲ್ಕು ವಿದ್ಯಾರ್ಥಿಗಳಲ್ಲಿ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ.