Thursday, 12th December 2024

ಭಾರತದಲ್ಲಿ ಸೋಂಕಿತರ ಸಂಖ್ಯೆ 39980ಕ್ಕೆ ಏರಿಕೆ

ದೆಹಲಿ:

ದೇಶದಲ್ಲಿ ಕಳೆದ 24ಗಂಟೆಗಳಲ್ಲಿ 2644 ಕರೋನಾ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 39980ಕ್ಕೆ ಏರಿಕೆಯಾಗಿದೆ.

ಇಲ್ಲಿಯವರೆಗೆ ದೇಶಾದ್ಯಂತ 10632 ಜನರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 682 ರೋಗಿಗಳು ಚೇತರಿಕೆ ಕಂಡಿದ್ದಾರೆ. ದೇಶದಲ್ಲಿ ಚೇತರಿಕೆ ಪ್ರಮಾಣ ಶೇ.26.59ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ. ಈ ನಡುವೆ ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವರ್ಧನ್, ಇಂದಿನವರೆಗೆ ದೇಶಾದ್ಯಂತ 10 ಲಕ್ಷ ಜನರ ತಪಾಸಣೆ ನಡೆಸಲಾಗಿದ್ದು, ಪ್ರತಿ ನಿತ್ಯ 74 ಸಾವಿರ ಟೆಸ್‌ಟ್‌‌ಗಳನ್ನು ನಡೆಸಲಾಗುತ್ತಿದೆ.