Friday, 13th December 2024

ತಗ್ಗಿದ ಕರೋನಾ ಪ್ರಕರಣ: 1.65ಲಕ್ಷ ಸೋಂಕಿತರು ಪತ್ತೆ

#corona

ನವದೆಹಲಿ: ದೇಶಾದ್ಯಂತ ಅಬ್ಬರಿಸಿದ್ದ ಮಾರಕ ಕರೋನಾ ಸೋಂಕಿನ ಪ್ರಮಾಣ ಕೊಂಚ ತಗ್ಗಿದೆ.

ಕಳೆದ 24 ಗಂಟೆಗಳ ಅವಧಿಯಲ್ಲಿ 1.65ಲಕ್ಷಕ್ಕೂ ಅಧಿಕ ಹೊಸ ಕೋವಿಡ್-19 ಸೋಂಕು ಪ್ರಕರಣಗಳು ವರದಿಯಾಗಿದ್ದು, 3,460 ಸೋಂಕಿತರು ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಆ ಮೂಲಕ ದೇಶದಲ್ಲಿನ ಒಟ್ಟಾರೆ ಸೋಂಕಿತರ ಸಂಖ್ಯೆ 2,78,94,800ಕ್ಕೆ ಏರಿಕೆಯಾಗಿದೆ. ಅಂತೆಯೇ 3,460 ಸೋಂಕಿತರು ಮೃತಪಟ್ಟಿದ್ದು, ಸೋಂಕಿಗೆ ಬಲಿಯಾದವರ ಸಂಖ್ಯೆ 3,25,972 ಕ್ಕೆ ಏರಿಕೆಯಾಗಿದೆ.