Saturday, 14th December 2024

ಮುಂದಿನ ಒಂದೂವರೆ ವರ್ಷದಲ್ಲಿ ಸರ್ಕಾರಿ ಇಲಾಖೆಗಳಲ್ಲಿ 10 ಲಕ್ಷ ಜನರ ನೇಮಕಾತಿ

ನವದೆಹಲಿ: ಮುಂದಿನ ಒಂದೂವರೆ ವರ್ಷದಲ್ಲಿ ದೇಶದ ಎಲ್ಲಾ ಸರ್ಕಾರಿ ಇಲಾಖೆ ಗಳಲ್ಲಿ 10 ಲಕ್ಷ ಜನರನ್ನು ನೇಮಕಾತಿ ಮಾಡಿಕೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಸೂಚನೆ ನೀಡಿರುವುದಾಗಿ ವರದಿ ತಿಳಿಸಿದೆ.

ಎಲ್ಲಾ ಸರ್ಕಾರಿ ಇಲಾಖೆಗಳ ಮತ್ತು ಸಚಿವಾಲಯಗಳ ಮಾನವ ಸಂಪನ್ಮೂಲಗಳ ಸ್ಥಿತಿಗತಿಯ ಪರಾಮರ್ಶೆ ನಡೆಸಿದ ನಂತರ ಪ್ರಧಾನಿ ಮೋದಿ ಅವರು ನೇಮಕಾತಿ ಕುರಿತು ನಿರ್ದೇಶನ ನೀಡಿರುವುದಾಗಿ ವರದಿ ಹೇಳಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ಇಲಾಖೆಗಳ ಮತ್ತು ಸಚಿವಾಲಯಗಳ ಮಾನವ ಸಂಪನ್ಮೂಲಗಳ ಸ್ಥಿತಿಗತಿಯನ್ನು ಪರಿಶೀಲಿಸಿದ್ದು, ಮುಂದಿನ 1.5 ವರ್ಷದಲ್ಲಿ 10 ಲಕ್ಷ ಜನರನ್ನು ನೇಮಕಾತಿ ಮಾಡಿಕೊಳ್ಳುವಂತೆ ಸೂಚನೆ ನೀಡಿರುವುದಾಗಿ” ಪ್ರಧಾನಮಂತ್ರಿ ಕಚೇರಿ ಟ್ವೀಟ್ ನಲ್ಲಿ ವಿವರಿಸಿದೆ.

ಸರ್ಕಾರಿ ಇಲಾಖೆಯಲ್ಲಿ ಭಾರೀ ಪ್ರಮಾಣದಲ್ಲಿ ಹುದ್ದೆಗಳು ಖಾಲಿ ಇದ್ದು, ಇದರ ನೇಮಕಾತಿಗಾಗಿ ವಿಪಕ್ಷಗಳು ಆಗ್ರಹಿಸಿದ್ದವು.

ಬಿಜೆಪಿ ಸಂಸದ ವರುಣ್ ಗಾಂಧಿ ಇತ್ತೀಚೆಗಷ್ಟೇ ದೇಶದಲ್ಲಿ ಖಾಲಿ ಇರುವ ಸರ್ಕಾರಿ ಹುದ್ದೆಗಳ ಅಂಕಿ ಅಂಶವನ್ನು ಟ್ವೀಟ್ ಮಾಡಿದ್ದು, ದೇಶದಲ್ಲಿನ ನಿರುದ್ಯೋಗ ಹೆಚ್ಚಳದ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದರು.