ಬೆಂಕಿ ಅನಾಹುತದಲ್ಲಿ ಇನ್ನಷ್ಟು ರೋಗಿಗಳು ಸಿಲುಕಿಕೊಂಡಿದ್ದು ಸಾವು-ನೋವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ. ಅಗ್ನಿ ಶಾಮಕ ದಳ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿ ಸುವ ಕಾರ್ಯದಲ್ಲಿ ತೊಡಗಿದೆ. ಅಕ್ಕಪಕ್ಕದ ವಾರ್ಡ್ ಗಳಿಗೆ ಬೆಂಕಿ ಹತ್ತಿಕೊಳ್ಳದಂತೆ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ.
ಆಸ್ಪತ್ರೆಯ ಆಡಳಿತಾಧಿಕಾರಿಗಳು, ಸಿಬ್ಬಂದಿ ಸ್ಥಳೀಯರು ಮತ್ತು ರಕ್ಷಣಾ ತಂಡದ ಸಹಾಯದಿಂದ ಹಲವು ರೋಗಿಗಳನ್ನು ಹತ್ತಿರದ ವಾರ್ಡ್ ಗಳಿಗೆ ವರ್ಗಾಯಿಸಿದ್ದಾರೆ.
ಅವಘಡ ನಡೆಯುವ ಸಂದರ್ಭದಲ್ಲಿ ಐಸಿಯುನಲ್ಲಿ ಕನಿಷ್ಠ 20 ಮಂದಿ ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದರು. ಪ್ರತ್ಯಕ್ಷದರ್ಶಿ ಗಳು ಹೇಳುವ ಪ್ರಕಾರ ಐಸಿಯು ಬೆಂಕಿಗೆ ಹೆಚ್ಚಿನ ಪ್ರಮಾಣದಲ್ಲಿ ಆಹುತಿಯಾಗಿದ್ದು ಸಾವು ನೋವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.
ಸ್ಥಳಕ್ಕೆ ಹಿರಿಯ ಪೊಲೀಸರು, ಅಗ್ನಿಶಾಮಕ ಅಧಿಕಾರಿಗಳು ಆಗಮಿಸಿದ್ದು ರಕ್ಷಣಾ ಮತ್ತು ಪರಿಹಾರ ಕಾರ್ಯಗಳ ನಿಗಾ ವಹಿಸು ತ್ತಿದ್ದಾರೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಅವಘಡ ಸಂಭವಿಸಿರಬಹುದು ಎಂದು ಶಂಕಿಸಲಾಗಿದ್ದು ತನಿಖೆ ನಡೆಸ ಲಾಗುತ್ತಿದೆ.