Thursday, 12th December 2024

100 ಯೂನಿಟ್‌ಗಳವರೆಗೆ ಉಚಿತ ವಿದ್ಯುತ್: ಜಾರ್ಖಂಡ್ ಸರ್ಕಾರ

ರಾಂಚಿ: ಆರ್ಥಿಕವಾಗಿ ದುರ್ಬಲವಾಗಿರುವ ಗ್ರಾಹಕರಿಗೆ ತಿಂಗಳಿಗೆ 100 ಯೂನಿಟ್‌ಗಳವರೆಗೆ ಉಚಿತ ವಿದ್ಯುತ್ ನೀಡುವ ಪ್ರಸ್ತಾಪಕ್ಕೆ ಜಾರ್ಖಂಡ್ ಸಚಿವ ಸಂಪುಟ ಒಪ್ಪಿಗೆ ನೀಡಿದೆ.

ಒಟ್ಟು 55 ಪ್ರಸ್ತಾವನೆಗಳಿಗೆ ಅನುಮೋದನೆ ನೀಡಿದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರವನ್ನು ಸಂಪುಟ ಕೈಗೊಂಡಿದೆ.

ಷರತ್ತುಗಳೊಂದಿಗೆ ಹಳೆಯ ಪಿಂಚಣಿ ಯೋಜನೆಯನ್ನು ಜಾರಿಗೆ ತರಲು ಸಂಪುಟವು ಮತ್ತೊಂದು ಪ್ರಮುಖ ನಿರ್ಧಾರವನ್ನು ತೆಗೆದುಕೊಂಡಿತು. ಹೊಸ ಯೋಜನೆಯಿಂದ ಹಳೆಯ ಪಿಂಚಣಿ ಯೋಜನೆಗೆ ಮರಳಲು ಸ್ಟ್ಯಾಂಡರ್ಡ್ ಆಪರೇಟಿಂಗ್ ಪ್ರೊಸೀಜರ್ (ಎಸ್‌ಒಪಿ) ಕರಡು ರೂಪಿಸಲು ಅಭಿವೃದ್ಧಿ ಆಯುಕ್ತರ ನೇತೃತ್ವದಲ್ಲಿ ಸಮಿತಿ ರಚಿಸ ಲಾಗುವುದು.

ಪಿಂಚಣಿ ಯೋಜನೆಗೆ ಪರಿವರ್ತನೆಗಾಗಿ ಅಭಿವೃದ್ಧಿ ಆಯುಕ್ತರು ಮತ್ತು ಹಣಕಾಸು ಮತ್ತು ಸಿಬ್ಬಂದಿ ಇಲಾಖೆಗಳ ಪ್ರಧಾನ ಕಾರ್ಯದರ್ಶಿಗಳು ಸ್ಟ್ಯಾಂಡರ್ಡ್ ಆಪರೇಟಿಂಗ್ ಪ್ರೊಸೀಜರ್ ಅನ್ನು ಹೊರತರುತ್ತಾರೆ ಮತ್ತು ಅದನ್ನು ಅನುಮೋದನೆಗಾಗಿ ಸಚಿವ ಸಂಪುಟಕ್ಕೆ ಕಳುಹಿಸಲಾಗುವುದು ಎಂದು ಸಂಪುಟ ಸಚಿವಾಲಯದ ಪ್ರಧಾನ ಕಾರ್ಯ ದರ್ಶಿ ವಂದನಾ ದಾಡೆಲ್ ಹೇಳಿದರು.

ಜಾರ್ಖಂಡ್‌ನ ಸ್ಥಳೀಯ ನಿವಾಸಿಗಳಿಗೆ ಖಾಸಗಿ ವಲಯದ ಉದ್ಯೋಗಗಳಲ್ಲಿ ಶೇ.75ರಷ್ಟು ಮೀಸಲಾತಿಗಾಗಿ ನಿಯಮಗಳು ಮತ್ತು ನಿಬಂಧನೆಗಳನ್ನು ಸಹ ಕ್ಯಾಬಿನೆಟ್ ಅನುಮೋದಿಸಿದೆ. ಖಾಸಗಿ ವಲಯದಲ್ಲಿ ಸ್ಥಳೀಯರಿಗೆ ಉದ್ಯೋಗದಲ್ಲಿ ಶೇ 75ರಷ್ಟು ಮೀಸ ಲಾತಿ ನೀಡಲು ರಾಜ್ಯ ಸಚಿವ ಸಂಪುಟ ಮೊದಲೇ ನಿರ್ಧರಿಸಿತ್ತು.

ಜುಲೈ 16 ರ ಶನಿವಾರ ಜಾರ್ಖಂಡ್ ಇತಿಹಾಸ ಬರೆಯಲಿದೆ. ಸುಮಾರು 10,000 ಉದ್ಯೋಗಗಳನ್ನು ಯುವಕರಿಗೆ ನೀಡಲಾಗು ವುದು ಎಂದು ಕಾಂಗ್ರೆಸ್ ನಾಯಕ ಅಲೋಕ್ ದುಬೆ ಹೇಳಿದರು. ಜಾರ್ಖಂಡ್ ವಿಧಾನಸಭೆಯ ಮುಂಗಾರು ಅಧಿವೇಶನವು ಜು.29 ರಿಂದ ಪ್ರಾರಂಭವಾಗಲಿದೆ ಮತ್ತು ಆಗಸ್ಟ್ 5 ರಂದು ಕೊನೆಗೊಳ್ಳಲಿದೆ. ರಾಜ್ಯ ಸರ್ಕಾರವು ಆಗಸ್ಟ್ 1 ರಂದು ಪ್ರಸಕ್ತ ಹಣಕಾಸು ವರ್ಷಕ್ಕೆ ತನ್ನ ಮೊದಲ ಪೂರಕ ಬಜೆಟ್ ಅನ್ನು ಮಂಡಿಸಲಿದೆ.

ಜುಲೈ 1 ರಿಂದ ಪ್ರತಿ ಮನೆಗೆ 300 ಯೂನಿಟ್ ಉಚಿತ ವಿದ್ಯುತ್ ನೀಡುವುದಾಗಿ ಎಎಪಿ ಸರ್ಕಾರ ಈ ಹಿಂದೆ ಘೋಷಿಸಿತ್ತು. ಪ್ರತಿ ಮನೆಗೆ ಪ್ರತಿ ತಿಂಗಳು 300 ಯೂನಿಟ್‌ ಉಚಿತ ವಿದ್ಯುತ್ ಸಿಗಲಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಘೋಷಿಸಿದ್ದರು. ಜಾರ್ಖಂಡ್‌ನಲ್ಲೂಈಗ ಬಡವರಿಗೆ 100 ಯುನಿಟ್‌ ಉಚಿತ ವಿದ್ಯುತ್‌ ನೀಡಲು ಮುಂದಾಗಿದೆ.