Friday, 22nd November 2024

ಕರೋನಾ ಅಬ್ಬರ ಇಳಿಕೆ: 10,126 ಪ್ರಕರಣಗಳು ದೃಢ

#corona

ನವದೆಹಲಿ: ಮಹಾಮಾರಿ ಕರೋನಾ ಅಬ್ಬರ ಇಳಿಕೆಯಾಗುತ್ತಿರುವ ಬೆಳವಣಿಗೆಗಳು ಕಂಡು ಬರುತ್ತಿದ್ದು, ದೇಶದಲ್ಲಿ ಮಂಗಳ ವಾರ ಬೆಳಿಗ್ಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 10,126 ಪ್ರಕರಣಗಳು ದೃಢಪಟ್ಟಿದ್ದು, 332 ಮಂದಿ ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ.

ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 1,40,638ಕ್ಕೆ ತಲುಪಿದೆ. ಕಳೆದ 24 ಗಂಟೆಗಳಲ್ಲಿ 1,982 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 3,37,75,086ಕ್ಕೆ ತಲುಪಿದೆ. ಭಾರತದಲ್ಲಿ ಒಂದೇ ದಿನ 8,70,058 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಒಟ್ಟಾರೆ, 1,09,08,16,356 ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.