Sunday, 24th November 2024

1,016 ಕೋವಿಡ್ ಪ್ರಕರಣ ದೃಢ

ವದೆಹಲಿ: ದೇಶದಾದ್ಯಂತ ಗುರುವಾರ ಬೆಳಿಗ್ಗೆ ಕೊನೆಗೊಂಡ 24 ಗಂಟೆಗಳಲ್ಲಿ ಹೊಸದಾಗಿ 1,016 ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಮೂರು ಮಂದಿ ಮೃತಪಟ್ಟಿದ್ದಾರೆ.

ಸಕ್ರಿಯ ಪ್ರಕರಣಗಳ ಸಂಖ್ಯೆ 13,187ಕ್ಕೆ ಇಳಿಕೆಯಾಗಿದೆ. ಈವರೆಗೆ ಒಟ್ಟು 4,41,20,267 ಮಂದಿ ಗುಣಮುಖರಾಗಿದ್ದಾರೆ. ದೇಶದಲ್ಲಿ ಇದುವರೆಗೆ 4,46,63,968 ಮಂದಿಗೆ ಕೊರೊನಾ ಸೋಂಕು ತಗುಲಿದ್ದು, ಒಟ್ಟು 5,30,514 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ.

ಒಟ್ಟು ಸೋಂಕಿತರ ಪೈಕಿ ಶೇ 0.03 ಸಕ್ರಿಯ ಪ್ರಕರಣಗಳಿವೆ. ಹಾಗೆಯೇ ರಾಷ್ಟ್ರೀಯ ಕೋವಿಡ್ ಚೇತರಿಕೆ ಪ್ರಮಾಣ ಶೇ 98.78 ಆಗಿದೆ. ದೇಶದಲ್ಲಿ ಈವರೆಗೆ 219.76 ಕೋಟಿ ಕೋವಿಡ್ ಲಸಿಕೆ ಡೋಸ್ ವಿತರಿಸಲಾಗಿದೆ.