Sunday, 13th October 2024

ಕರೋನಾ ಬ್ರೇಕಿಂಗ್: 10,197 ಜನರಲ್ಲಿ ಸೋಂಕು ಪತ್ತೆ

#corona

ನವದೆಹಲಿ: ದೇಶದಲ್ಲಿ ಕರೋನಾ ಸೋಂಕಿತರ ಸಂಖ್ಯೆಯಲ್ಲಿ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 10,197 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ಇನ್ನು ಸಾವಿನ ಸಂಖ್ಯೆಯಲ್ಲಿಯೂ ಏರಿಕೆಯಾಗಿದ್ದು, ಒಂದೇ ದಿನದಲ್ಲಿ 301 ಜನ ಬಲಿಯಾಗಿದ್ದಾರೆ. ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 464153 ಕ್ಕೆ ಏರಿಕೆಯಾಗಿದೆ.

 

ದೇಶದಲ್ಲಿ 128555 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 12134 ಜನರು ಕೋವಿಡ್ ನಿಂದ ಗುಣಮುಖರಾಗಿ ದ್ದಾರೆ. ದೇಶದಲ್ಲಿ ಈವರೆಗೆ 33873890 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ದೇಶದಲ್ಲಿ ಈವರೆಗೆ ಒಟ್ಟು 1,13,68,79,685 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.