Saturday, 14th December 2024

10,725 ಜನರಲ್ಲಿ ಹೊಸದಾಗಿ ಸೋಂಕು ಪತ್ತೆ

#covid

ವದೆಹಲಿ: ಮಳೆಯ ಅಬ್ಬರದ ನಡಿವೆ ದೇಶದಲ್ಲಿ ಕರೋನಾ ಸೋಂಕಿತರ ಸಂಖ್ಯೆ ಮತ್ತೆ ಏರಿಕೆಯಾಗುತ್ತಿದೆ.

ಕಳೆದ 24 ಗಂಟೆಯಲ್ಲಿ ಮತ್ತೆ 10 ಸಾವಿರಕ್ಕೂ ಹೆಚ್ಚು ಜನರಲ್ಲಿ ಸೋಂಕು ದೃಢಪಟ್ಟಿದೆ. ಒಂದೇ ದಿನದಲ್ಲಿ 10,725 ಜನರಲ್ಲಿ ಹೊಸದಾಗಿ ಸೋಂಕು ಸೋಂಕು ಪತ್ತೆಯಾಗಿದೆ. ಸೋಂಕಿತರ ಸಾವಿನ ಸಂಖ್ಯೆಯಲ್ಲಿಯೂ ಏರಿಕೆಯಾಗಿದ್ದು, ದೇಶದಲ್ಲಿ ಈವರೆಗೆ ಕೋವಿಡ್ ಗೆ ಮೃತಪಟ್ಟವರ ಸಂಖ್ಯೆ 527488ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 94,047 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.59ರಷ್ಟು ಜನ ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ದೇಶದಲ್ಲಿ ಈವರೆಗೆ 4,37,57,385 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ದೇಶದಲ್ಲಿ ಈವರೆಗೆ 2,10,82,34,347 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 3,92,837 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.