Saturday, 14th December 2024

ಮೊರ್ಬಿಯಲ್ಲಿ 108 ಅಡಿ ಹನುಮಾನ್ ಪ್ರತಿಮೆ ಅನಾವರಣ

ಅಹಮದಾಬಾದ್: ಎಲ್ಲೆಡೆ ಶನಿವಾರ ರಾಮನ ಭಕ್ತ ಹನುಮನ ಜಯಂತಿಯನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ. ಈ ಸಂದರ್ಭ ಪ್ರಧಾನಿ ನರೇಂದ್ರ ಮೋದಿ ಮೊರ್ಬಿಯಲ್ಲಿ ನಿರ್ಮಿಸಲಾಗಿರುವ 108 ಅಡಿ ಹನುಮಾನ್ ಪ್ರತಿಮೆಯನ್ನು ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಅನಾವರಣ ಗೊಳಿಸಿದರು.

ಇಂದು ಹನುಮ ಜಯಂತಿಯ ವಿಶೇಷ ಸಂದರ್ಭವನ್ನು ಆಚರಿಸುತ್ತಿದ್ದೇವೆ. ಮೊರ್ಬಿಯಲ್ಲಿ 108 ಅಡಿ ಎತ್ತರದ ಹನುಮಾನ್ ಜೀ ಪ್ರತಿಮೆ ಉದ್ಘಾಟನೆ ನಡೆಯಲಿದೆ. ವೀಡಿಯೋ ಕಾನ್ಫರೆನ್ಸಿಂಗ್ ಮೂಲಕ ಈ ಕಾರ್ಯಕ್ರಮದ ಭಾಗವಾಗಲು ಅವಕಾಶ ಸಿಕ್ಕಿರುವುದಕ್ಕೆ ನನಗೆ ಗೌರವವಿದೆ’ ಎಂದು ದೇವರ ಪ್ರತಿಮೆಯ ಚಿತ್ರಗಳೊಂದಿಗೆ ಟ್ವೀಟ್ ಮಾಡಿದ್ದಾರೆ.

ಸರಣಿಯ ಮೊದಲ ಪ್ರತಿಮೆಯನ್ನು ಉತ್ತರದಲ್ಲಿ ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿ 2010 ರಲ್ಲಿ ಸ್ಥಾಪಿಸಲಾಯಿತು. ಮೂರನೇ ಪ್ರತಿಮೆಯ ಕೆಲಸವನ್ನು ದಕ್ಷಿಣದಲ್ಲಿ ರಾಮೇಶ್ವರಂನಲ್ಲಿ ಪ್ರಾರಂಭಿಸಲಾಗಿದೆ.