Sunday, 28th April 2024

ಕರೋನಾ ಇಳಿಕೆ: 1,082 ಹೊಸ ಪ್ರಕರಣ ಪತ್ತೆ

ನವದೆಹಲಿ: ಭಾರತದಲ್ಲಿ ಕರೋನಾ ಇಳಿಕೆ ಪ್ರಕರಣ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 1,082 ಹೊಸ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,46,59,447ಕ್ಕೆ ಏರಿಕೆಯಾಗಿದೆ.
ಕೋವಿಡ್ ನಿಂದ ಮೃತಪಟ್ಟವರ ಒಟ್ಟು ಸಂಖ್ಯೆ 5,30,486ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಸೋಂಕಿತರ ಸಂಖ್ಯೆ ಇಳಿಕೆಯಾಗು ತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 15,200ಕ್ಕೆ ಇಳಿಕೆಯಾಗಿದೆ. ಈ ನಡುವೆ ಕಳೆದ 24 ಗಂಟೆಗಳಲ್ಲಿ 1,580 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 4,41,13,761ಕ್ಕೆ ತಲುಪಿದೆ.
ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ 2,19,71,46,012 ಜನರಿಗೆ ಲಸಿಕೆ ನೀಡಲಾಗಿದೆ ಎಂದು ತಿಳಿಸಿದೆ.
error: Content is protected !!