Thursday, 12th December 2024

1,096 ಮಂದಿಗೆ ಹೊಸದಾಗಿ ಸೋಂಕು ದೃಢ

ನವದೆಹಲಿ : ದೇಶದಲ್ಲಿ ಕರೋನಾ ವೈರಸ್ ಸೋಂಕಿನ ಪ್ರಕರಣಗಳು ಇಳಿಕೆಯಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ 1,096 ಮಂದಿಗೆ ಹೊಸದಾಗಿ ಸೋಂಕು ದೃಢಪಟ್ಟಿದೆ.

ಕಳೆದ 24 ಗಂಟೆಗಳಲ್ಲಿ 1,096 ಮಂದಿಗೆ ಹೊಸದಾಗಿ ಸೋಂಕು ದೃಢಪಟ್ಟಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ತಿಳಿಸಿದೆ.

ಕಳೆದ 24 ಗಂಟೆಗಳಲ್ಲಿ 81 ಜನರು ಸೋಂಕಿನಿಂದ ಮೃತಪಟ್ಟಿದ್ದಾರೆ. ಈ ಮೂಲಕ ದೇಶದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 5,21,345 ಕ್ಕೆ ಏರಿಕೆಯಾಗಿದೆ. ಭಾರತದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 13,013ಕ್ಕೆ ಏರಿಕೆಯಾಗಿದೆ.