Monday, 13th May 2024

ರಥೋತ್ಸವದ ವೇಳೆ ತೇರಿಗೆ ವಿದ್ಯುತ್​ ತಂತಿ ಸ್ಪರ್ಶ: 11 ಮಂದಿ ಸಾವು

ತಂಜಾವೂರು: ತಂಜಾವೂರಿನ ಕಾಳಿಮೇಡು ಗ್ರಾಮದಲ್ಲಿ ನಡೆದ ರಥೋತ್ಸವ ದ ವೇಳೆ ತೇರಿಗೆ ಹೈವೋಲ್ಟೇಜ್​ ವಿದ್ಯುತ್​ ತಂತಿ ತಗುಲಿ ಮೂವರು ಮಕ್ಕಳು ಸೇರಿದಂತೆ 11 ಮಂದಿ ಮೃತಪಟ್ಟು, 13 ಮಂದಿ ಗಾಯಗೊಂಡಿದ್ದಾರೆ.

ತಂಜಾವೂರಿನ ಅಪ್ಪರ ಸ್ವಾಮಿ ದೇವಾಲಯದಲ್ಲಿ ರಥೋತ್ಸವ ನಡೆಯುತ್ತಿತ್ತು. ಅಲಂಕೃತಗೊಂಡಿದ್ದ ರಥವನ್ನು ಗ್ರಾಮದ ಬೀದಿ ಗಳಲ್ಲಿ ಎಳೆಯಲಾಗುತ್ತಿತ್ತು. ಈ ವೇಳೆ ರಥಕ್ಕೆ ವಿದ್ಯುತ್ ತಂತಿ ಸ್ಪರ್ಶಿಸಿದೆ. ಘಟನೆಯಲ್ಲಿ 13 ಮಂದಿ ಗಾಯ ಗೊಂಡಿದು, ತಂಜಾ ವೂರಿನ ವೈದ್ಯಕೀಯ ಕಾಲೇಜಿನಲ್ಲಿ ಗಾಯಾಳು ಗಳಿಗೆ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಘಟನೆ ಸಂಬಂಧ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದು, ತನಿಖೆ ಆರಂಭಿಸಲಾಗಿದೆ ಎಂದು ವಿ. ಬಾಲಕೃಷ್ಣನ್ ಇನ್ಸ್‌ಪೆಕ್ಟರ್ ಜನರಲ್ ಆಫ್ ಪೋಲೀಸ್ ಹೇಳಿದ್ದಾರೆ.

ಮೃತರನ್ನು ಎಂ ಮೋಹನ್ (22), ಕೆ ಪ್ರತಾಪ್ (36), ಎ ಅನ್ಬಳಗನ್ (60), ಅವರ ಪುತ್ರ ರಾಘವನ್ (24), ಆರ್ ಸಂತೋಷ್ (15), ಟಿ ಸೆಲ್ವಂ (56), ಎಂ ರಾಜ್‌ಕುಮಾರ್ (14), ಆರ್ ಸ್ವಾಮಿನಾಥನ್ (56), ಎ ಗೋವಿಂದರಾಜ್, ಎಸ್ ಭರಣಿ (13), ನಾಗರಾಜ್ (60) ಎಂದು ಗುರ್ತಿಸಲಾಗಿದೆ. ಎಲ್ಲರೂ ಕಾಳಿಮೇಡು ಗ್ರಾಮದವರಾಗಿದ್ದಾರೆಂದು ತಿಳಿಸಿದ್ದಾರೆ.

ದೇವರ ರಥೋತ್ಸವ ಮುಗಿಸಿ ದೇವಸ್ಥಾನಕ್ಕೆ ಹಿಂತಿರುಗುತ್ತಿದ್ದ ಸಂದರ್ಭದಲ್ಲಿ ಬೆಳಗಿನ ಜಾವ 3 ಗಂಟೆ ಸುಮಾರಿಗೆ ಘಟನೆ ನಡೆದಿದೆ ಎಂದು ಹೇಳಲಾಗುತ್ತಿದೆ. ಘಟನೆಗೆ ತೀವ್ರ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ತೀವ್ರ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಕ್ಕೆ ತಲಾ ರೂ.5 ಲಕ್ಷ ಪರಿಹಾರ ನೀಡುವುದಾಗಿ ಘೋಷಿಸಿದ್ದಾರೆ.

ಘಟನೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರೂ ಕೂಡ ಸಂತಾಪ ಸೂಚಿಸಿದ್ದು, ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ.ಗಳ ಪರಿಹಾರ ಹಾಗೂ ಗಾಯಾಳುಗಳಿಗೆ ರೂ. 50,000 ನೀಡುವುದಾಗಿ ಪ್ರಕಟಿಸಿದ್ದಾರೆ.

error: Content is protected !!