ಮೂವರು ತಾತ್ಕಾಲಿಕ ಅಧಿಕಾರಿಗಳು ಮತ್ತು ದೆಹಲಿ ಸರ್ಕಾರದ ಅಬಕಾರಿ ಇಲಾಖೆಯ ಆರು ಅಧಿಕಾರಿಗಳನ್ನು ಅಮಾನತು ಗೊಳಿಸಲಾಗಿದೆ ಎಂದು ಕಚೇರಿಯ ಮೂಲಗಳು ತಿಳಿಸಿವೆ.
ಅಬಕಾರಿ ನೀತಿಯ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳ ಕಡೆಯಿಂದ ಆಗಿರುವ ‘ಗಂಭೀರ ಲೋಪ’ ವನ್ನು ಗಮನ ದಲ್ಲಿಟ್ಟುಕೊಂಡು, ವಿಜಿಲೆನ್ಸ್ ನಿರ್ದೇಶನಾಲಯ (ಡಿಒವಿ) ಸಲ್ಲಿಸಿರುವ ತನಿಖಾ ವರದಿಯ ಆಧಾರದ ಮೇಲೆ ಸಕ್ಸೇನಾ ಅವರು ಈ ಕ್ರಮ ಕೈಗೊಂಡಿದ್ದಾರೆ ಎಂದು ತಿಳಿಸಿದ್ದಾರೆ.
ನವೆಂಬರ್ 17, 2021 ರಂದು ಅಬಕಾರಿ ನೀತಿಯನ್ನು ಜಾರಿಗೆ ತರಲಾಗಿತ್ತು. ಈ ನೀತಿಯನ್ನು ಈಗ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ (ಎಎಪಿ)ದ ಸರ್ಕಾರ ಹಿಂಪಡೆದಿದೆ.