Sunday, 28th April 2024

1,132 ಹೊಸ ಕರೋನಾ ಸೋಂಕು ಪ್ರಕರಣ ಪತ್ತೆ

ನವದೆಹಲಿ: ಕಳೆದ 24 ಗಂಟೆಗಳಲ್ಲಿ 1,132 ಹೊಸ ವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 4,46,60,579 ಕ್ಕೆ ಏರಿಕೆ ಯಾಗಿದೆ.
ಇದೇ ವೇಳೆ ಸಕ್ರಿಯ ಪ್ರಕರಣಗಳ ಸಂಖ್ಯೆ 14,839ಕ್ಕೆ ಇಳಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಭಾನುವಾರ ಮಾಹಿತಿ ನೀಡಿದೆ. ಕೇರಳದಲ್ಲಿ 5 ಸೇರಿದಂತೆ 14 ಜನರು ಮೃತಪಟ್ಟಿದ್ದು, ಈವರೆಗೆ 5,30,500 ಮಂದಿ ಸೋಂಕಿನಿಂದ ಸಾವಿಗೀ ಡಾಗಿ ದ್ದಾರೆ.
ದೇಶದಲ್ಲಿ ಈವರೆಗೆ 4,41,15,240 ಜನರು ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ದೈನಂದಿನ ಮರಣ ಪ್ರಮಾಣ ಶೇ 1.19ರಷ್ಟಿದೆ.
ಸಚಿವಾಲಯದ ಪ್ರಕಾರ, ದೇಶದಾದ್ಯಂತ ನಡೆಯುತ್ತಿರುವ ಲಸಿಕೆ ಅಭಿಯಾನದ ಅಡಿ ಯಲ್ಲಿ 219.72 ಕ್ಕೂ ಅಧಿಕ ಕೋವಿಡ್ ವಿರುದ್ಧದ ಲಸಿಕಾ ಡೋಸುಗಳನ್ನು ವಿತರಿಸ ಲಾಗಿದೆ.
error: Content is protected !!