Friday, 13th December 2024

ಕರೋನಾ ಸೋಂಕಿತರ ಸಂಖ್ಯೆಯಲ್ಲಿ ಏರಿಕೆ: 11,451 ಪ್ರಕರಣ ದೃಢ

covid

ನವದೆಹಲಿ: ದೇಶದಲ್ಲಿ ಕರೋನಾ ಸೋಂಕಿತರ ಸಂಖ್ಯೆಯಲ್ಲಿ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 11,451 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

266 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ದೇಶದಲ್ಲಿ ಈವರೆಗೆ ಮೃತಪಟ್ಟವರ ಸಂಖ್ಯೆ 461057 ಕ್ಕೆ ಏರಿಕೆಯಾಗಿದೆ. ಇನ್ನು ದೇಶದಲ್ಲಿ 142826 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 13204 ಜನರು ಕೋವಿಡ್ ನಿಂದ ಗುಣಮುಖರಾಗಿ ದ್ದಾರೆ. ದೇಶದಲ್ಲಿ ಈವರೆಗೆ 33763104 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

24 ಗಂಟೆಯಲ್ಲಿ 23,84,096 ಜನರಿಗೆ ಲಸಿಕೆ ನೀಡಲಾಗಿದೆ. ದೇಶದಲ್ಲಿ ಈವರೆಗೆ ಒಟ್ಟು 1,08,47,23,042 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.