Monday, 14th October 2024

1,150 ಜನರಲ್ಲಿ ಹೊಸದಾಗಿ ಸೋಂಕು ದೃಢ

#corona

ನವದೆಹಲಿ: ದೇಶದಲ್ಲಿ ಕರೋನಾ ಸೋಂಕಿತರ ಸಂಖ್ಯೆ ಕೊಂಚ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 1,150 ಜನರಲ್ಲಿ ಹೊಸದಾಗಿ ಸೋಂಕು ದೃಢಪಟ್ಟಿದೆ.

ಸಾವಿನ ಸಂಖ್ಯೆಯಲ್ಲಿಯೂ ಏರಿಕೆಯಾಗಿದ್ದು, ಮತ್ತೆ 83 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಮೃತಪಟ್ಟವರ ಸಂಖ್ಯೆ 521656 ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ 11365 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 1194 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 42501196 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 1,85,55,07,496 ಡೋಸ್ ಲಸಿಕೆ ಹಾಕಲಾಗಿದೆ.