Wednesday, 11th December 2024

ಕೋವಿಡ್‌: 11,692 ಹೊಸ ಪ್ರಕರಣ ಪತ್ತೆ

ವದೆಹಲಿ: ಕಳೆದ 24 ಗಂಟೆಗಳ ಅವಧಿಯಲ್ಲಿ ಕೋವಿಡ್‌ ದೃಢಪಟ್ಟ 11,692 ಹೊಸ ಪ್ರಕರಣಗಳು ಭಾರತದಲ್ಲಿ ವರದಿಯಾಗಿವೆ.

ಸಕ್ರಿಯ ಪ್ರಕರಣಗಳ ಸಂಖ್ಯೆ 66,170ಕ್ಕೆ ಏರಿದೆ. ಇದೇ ಅವಧಿಯಲ್ಲಿ 28 ಸಾವುಗಳು ಸಂಭವಿಸಿದ್ದು, ಕೇರಳವೊಂದರಲ್ಲೇ 9 ಮಂದಿ ಮೃತಪಟ್ಟಿದ್ದಾರೆ.

ಇದರೊಂದಿಗೆ ಸಾವಿನ ಸಂಖ್ಯೆ 5,31,258ಕ್ಕೆ ತಲುಪಿದೆ.

ಒಟ್ಟಾರೆ ಸೋಂಕಿತರ ಸಂಖ್ಯೆ 4.48 ಕೋಟಿ (4,48,69,684)ಗೆ ತಲುಪಿದೆ. ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 4,42,72,256 ಕ್ಕೆ ಏರಿದೆ.

ಲಸಿಕೆ ಅಭಿಯಾನದ ಅಡಿಯಲ್ಲಿ ಇಲ್ಲಿಯ ವರೆಗೆ ದೇಶದಲ್ಲಿ 220.66 ಕೋಟಿ ಡೋಸ್‌ ಕೋವಿಡ್‌ ಲಸಿಕೆಯನ್ನು ನೀಡಲಾಗಿದೆ.