ನವದೆಹಲಿ: ದೇಶದಲ್ಲಿ ಕರೋನಾ ಕೇಸ್ ಹೆಚ್ಚಾಗುತ್ತಲಿದ್ದು, ಕಳೆದ 24 ಗಂಟೆಗಳಲ್ಲಿ 1,17,100 ಹೊಸ ಸೋಂಕುಗಳು ಪತ್ತೆಯಾಗಿದ್ದು, 302 ಸಾವುಗಳು ದಾಖಲಾಗಿವೆ.
ಈಗ 3,71,363 ಸಕ್ರಿಯ ಪ್ರಕರಣಗಳಿವೆ. ಓಮೈಕ್ರಾನ್ ಸಂಖ್ಯೆ 3,007 ದಾಟಿದೆ ಎಂದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ. ಪ್ರಕರಣಗಳ ಉಲ್ಬಣದಿಂದಾಗಿ ಶಾಲೆಗಳನ್ನು ಮುಚ್ಚುವುದು, ಸಾರ್ವಜನಿಕ ಸಾರಿಗೆಯ ಮೇಲಿನ ನಿರ್ಬಂಧಗಳು ಮತ್ತು ರಾತ್ರಿ ಮತ್ತು ವಾರಾಂತ್ಯದ ಕರ್ಫ್ಯೂ ಸೇರಿದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಈಗಾಗಲೇ ಹಲವಾರು ರಾಜ್ಯಗಳು ತೆಗೆದುಕೊಂಡಿವೆ.
ಕಳೆದ 24 ಗಂಟೆಗಳಲ್ಲಿ 302 ಕೋವಿಡ್ನಿಂದ ಮೃತಪಟ್ಟಿದ್ದಾರೆ. ಈ ಮೂಲಕ ಇದುವರೆಗೆ 4,83,178 ಸಾವುಗಳು ಸಂಭವಿಸಿವೆ. ಲಸಿಕಾ ಅಭಿಯಾನ ಆರಂಭಿಸಲಾಗಿದ್ದು, ಈವರೆಗೆ 149.66 ಕೋಟಿಗೂ ಅಧಿಕ ಡೋಸ್ ವ್ಯಾಕ್ಸಿನ್ ನೀಡಲಾಗಿದೆ.