Thursday, 12th December 2024

ಖಾಸಗಿ ಬಸ್-ಟ್ಯಾಂಕರ್​ ಡಿಕ್ಕಿ: 12 ಮಂದಿ ಸಜೀವ ದಹನ

ಬಾರ್ಮರ್: ರಾಜಸ್ಥಾನದ ಬಾರ್ಮರ್​-ಜೋಧ್​ಪುರ ಹೆದ್ದಾರಿಯಲ್ಲಿ ಖಾಸಗಿ ಬಸ್​ ಮತ್ತು ಟ್ಯಾಂಕರ್​ ಡಿಕ್ಕಿಯಾದ ಪರಿಣಾಮ ಬಸ್​​ಗೆ ಬೆಂಕಿ ಹೊತ್ತಿಕೊಂಡು ಸುಮಾರು 12 ಮಂದಿ ಸಜೀವ ದಹನವಾಗಿದ್ದಾರೆ.

ಟ್ಯಾಂಕರ್ ಹಾಗೂ ಬಸ್ ಮಧ್ಯೆ ಅಪಘಾತ ನಡೆದಿದ್ದು, ಡಿಕ್ಕಿ ಹೊಡೆದ ರಭಸಕ್ಕೆ ಬೆಂಕಿ ಹೊತ್ತಿಕೊಂಡಿದೆ. ಬಸ್ಸಿನಲ್ಲಿ ಪ್ರಯಾಣ ಮಾಡುತ್ತಿದ್ದ 12 ಮಂದಿ ಸಜೀವ ದಹನವಾಗಿ ದ್ದಾರೆ. ಈ ಅಪಘಾತದಲ್ಲಿ ಹಲವರು ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಬಸ್‌ನಲ್ಲಿ 25 ಮಂದಿ ಇದ್ದರು. ಡಿಕ್ಕಿಯ ನಂತರ ಬಸ್‌ಗೆ ಬೆಂಕಿ ಹೊತ್ತಿಕೊಂಡಿದೆ. ಪ್ರಯಾ ಣಿಕರು ಸಿಕ್ಕಿಬಿದ್ದಿದ್ದು, ಕೆಲವರು ಕಿಟಕಿ ಗ್ಲಾಸನ್ನು ಒಡೆದು ಹಾಕಿ ಹೊರಗೆ ಬಂದು ಬಚಾವ್ ಆಗಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಅಪಘಾತದ ಬಗ್ಗೆ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಧಾವಿಸಿ 10 ಜನರನ್ನು ರಕ್ಷಣೆ ಮಾಡಿದ್ದಾರೆ.

ಅಪಘಾತದಲ್ಲಿ 12 ಮಂದಿ ಮೃತಪಟ್ಟಿದ್ದಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್​ ಗೆಹ್ಲೋಟ್​ ಸಂತಾಪ ಸೂಚಿಸಿದ್ದಾರೆ. ಬಾರ್ಮರ್​ ಜಿಲ್ಲಾಧಿಕಾರಿಯೊಟ್ಟಿಗೆ ಮಾತನಾಡಿದ್ದೇನೆ. ರಕ್ಷಣಾ ಕಾರ್ಯಾಚರಣೆ ಕುರಿತಾಗಿ ಅವರಿಗೆ ನಿರ್ದೇಶನ ನೀಡಲಾಗಿದೆ.