Saturday, 14th December 2024

ಐಐಟಿ ಮದ್ರಾಸ್‌ ಕ್ಯಾಂಪಸ್‌ನಲ್ಲಿ 12 ಜನರಿಗೆ ಕೋವಿಡ್

ಚೆನ್ನೈ: ಐಐಟಿ ಮದ್ರಾಸ್‌ ಕ್ಯಾಂಪಸ್‌ನಲ್ಲಿ 12 ಜನರಿಗೆ ಕೋವಿಡ್ ಸೋಂಕು ತಗುಲಿದೆ. ಗುರುವಾರ ಈ ಕುರಿತು ಐಐಟಿ ಮದ್ರಾಸ್‌ನ ಅಧಿಕಾರಿಗಳು ಖಚಿತಪಡಿಸಿದ್ದಾರೆ. ತಮಿಳುನಾಡಿನಲ್ಲಿ ಬುಧವಾರ 31 ಹೊಸ ಕೋವಿಡ್ ಪ್ರಕರಣ ದಾಖಲಾಗಿತ್ತು.

ಕೇಂದ್ರ ಆರೋಗ್ಯ ಸಚಿವಾಲಯದ ಗುರುವಾರ ದೇಶದಲ್ಲಿ 2,380 ಹೊಸ ಕೋವಿಡ್ ಪ್ರಕರಣ ದಾಖಲಾಗಿದೆ. ದೇಶದ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 13,433 ಆಗಿದೆ. ಸದ್ಯ ಸೋಂಕು ತಗುಲಿರುವ 12 ಜನರಿಗೆ ಐಸೋಲೇಷನ್ ವಾರ್ಡ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಐಐಟಿ ಮದ್ರಾಸ್ ಕ್ಯಾಂಪಸ್‌ನ ಎಲ್ಲಾ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ಸೂಚಿಸಲಾಗಿದೆ.

ಕ್ಯಾಂಪಸ್‌ನ ಕೆಲವು ವಿದ್ಯಾರ್ಥಿಗಳಿಗೆ ಕೆಮ್ಮು, ನೆಗಡಿ ಮತ್ತು ಜ್ವರ ಪತ್ತೆಯಾಗಿತ್ತು. ಬುಧವಾರ ಎಲ್ಲಾ ವಿದ್ಯಾರ್ಥಿಗಳ ಸ್ಯಾಂಪಲ್‌ಗಳನ್ನು ಪಡೆದು ಪರೀಕ್ಷೆಗೆ ಕಳಿಸಲಾಗಿತ್ತು.