Friday, 22nd November 2024

ಪುಲ್ವಾಮಾದಲ್ಲಿ ಗ್ರೆನೇಡ್ ದಾಳಿ: 12 ಮಂದಿಗೆ ಗಾಯ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಭಯೋತ್ಪಾದಕರು ನಡೆಸಿದ ಗ್ರೆನೇಡ್ ದಾಳಿಯಲ್ಲಿ ಕನಿಷ್ಠ 12 ಜನರು ಗಾಯಗೊಂಡಿದ್ದಾರೆ ಎಂದು ಭದ್ರತಾ ಅಧಿಕಾರಿಗಳು ತಿಳಿಸಿದ್ದಾರೆ.

ಘಟನೆಯಲ್ಲಿ ಕೇಂದ್ರ ಮೀಸಲು ಪೊಲೀಸ್ ಪಡೆಯ (ಸಿಆರ್‌ಪಿಎಫ್) ಯಾರಿಗೂ ಗಾಯವಾಗಿಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಸಂಜೆ 6 ರ ಸುಮಾರಿಗೆ ಪುಲ್ವಾಮಾದ ಕಾಕಪೋರಾ ಚೌಕ್ ಬಳಿ ಅಪರಿಚಿತ ಭಯೋತ್ಪಾದಕರು ಗ್ರೆನೇಡ್ ಎಸೆದಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಉಗ್ರರ ಗುಂಪು ಕೇಂದ್ರೀಯ ಮೀಸಲು ಪೊಲೀಸ್ ಪಡೆ(ಸಿಆರ್ ಪಿಎಫ್) ಯನ್ನು ಗುರಿಯಾಗಿಸಿ ದಾಳಿ ನಡೆಸಲು ಯತ್ನಿಸಿ ವಿಫಲವಾಯಿತು. ಘಟನೆಯಲ್ಲಿ ಯಾವುದೇ ಸಿಬ್ಬಂದಿಗೆ ಗಾಯವಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.