Wednesday, 11th December 2024

12 ಕೆ.ಜಿ. ಚಿನ್ನ ಕಳ್ಳ ಸಾಗಣೆ: ಆರು ಮಂದಿ ಬಂಧನ

ವದೆಹಲಿ: ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 12 ಕೆ.ಜಿ. ಚಿನ್ನ ಕಳ್ಳ ಸಾಗಣೆಗೆ ಯತ್ನಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿಯನ್ನು ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ.

ಇದರ ಒಟ್ಟು ಮೌಲ್ಯ ₹5.38 ಕೋಟಿ ಎಂದು ಅಂದಾಜಿಸಲಾಗಿದೆ. ಬಂಧಿತರಲ್ಲಿ ಸುಡಾನ್ ಪ್ರಜೆ ಸಹ ಸೇರಿದ್ದಾನೆ.

 

ಬೆಲ್ಟ್ ಮೂಲಕ ಸುಡಾನ್ ಪ್ರಜೆ ಚಿನ್ನ ಕಳ್ಳ ಸಾಗಣೆಗೆ ಯತ್ನಿಸಿದ್ದಾನೆ ಎಂದು ಕಸ್ಟಮ್ಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಕೆಲವು ಪ್ರಯಾಣಿಕರು ಆತನಿಗೆ ತಪ್ಪಿಸಿಕೊಳ್ಳಲು ಸಹಾಯ ಮಾಡಲು ಗಲಾಟೆಯನ್ನು ಸೃಷ್ಟಿಸಿದರು. ಪ್ರಕರಣಕ್ಕೆ ಸಂಬಂಧಿಸಿ ದಂತೆ ಆರು ಮಂದಿಯನ್ನು ಬಂಧಿಸಲಾಗಿದೆ.

ಕಸ್ಟಮ್ಸ್ ಕಾಯ್ದೆ ಸೆಕ್ಷನ್ 110ರ ಅಡಿಯಲ್ಲಿ ಚಿನ್ನ ಕಳ್ಳ ಸಾಗಣೆ ಪ್ರಕರಣ ದಾಖಲಿಸಲಾಗಿದೆ.