Saturday, 14th December 2024

1,270 ಕೋವಿಡ್ ಪ್ರಕರಣಗಳು ಪತ್ತೆ, 31 ಮಂದಿ ಸಾವು

#corona

ನವದೆಹಲಿ: ಭಾರತದಲ್ಲಿ ಮಹಾಮಾರಿ ಕರೋನಾ 3ನೇ ಅಲೆ ಅಂತ್ಯದತ್ತ ಸಾಗಿದೆ. ಸೋಮವಾರ ಬೆಳಿಗ್ಗೆ ಅಂತ್ಯವಾದ 24 ಗಂಟೆ ಗಳ ಅವಧಿಯಲ್ಲಿ ಕೇವಲ 1,270 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 31 ಮಂದಿ ಮೃತಪಟ್ಟಿದ್ದಾರೆ.

ಇದರೊಂದಿಗೆ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,30,20,723ಕ್ಕೆ ಏರಿಕೆಯಾಗಿದೆ. ಕೋವಿಡ್ ನಿಂದ ಮೃತಪಡುವವರ ಸಂಖ್ಯೆ 5,21,035ಕ್ಕೆ ಏರಿಕೆಯಾಗಿದೆ. ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 15,859ಕ್ಕೆ ಇಳಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ 1,567 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡ ವರ ಸಂಖ್ಯೆ 4,24,83,829ಕ್ಕೆ ತಲುಪಿದೆ.

ಲಸಿಕೆ ಅಭಿಯಾನ ಆರಂಭವಾಗಿ, ಇಲ್ಲಿಯವರೆಗೂ 1,83,20,10,030 ಜನರಿಗೆ ಲಸಿಕೆ ನೀಡಲಾಗಿದೆ ಎಂದು ತಿಳಿಸಿದೆ.