Thursday, 12th December 2024

12,751 ಹೊಸ ಕೋವಿಡ್-19 ಪ್ರಕರಣಗಳು ಪತ್ತೆ

ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 12,751 ಹೊಸ ಕೋವಿಡ್-19 ಪ್ರಕರಣಗಳು ಪತ್ತೆಯಾಗಿದ್ದು, 42 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.

ಮಂಗಳವಾರ ದೇಶದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 4,41,74,650ಕ್ಕೆ ಏರಿಕೆಯಾಗಿದ್ದು, ಸಾವಿನ ಸಂಖ್ಯೆ 5,26,772ಕ್ಕೆ ಜಿಗಿತ ಕಂಡಿದೆ. ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 1,31,807ಕ್ಕೆ ಇಳಿಕೆಯಾಗಿದೆ.

ದೇಶದಲ್ಲಿ ಒಟ್ಟಾರೆ ಗುಣಮುಖಿತರ ಸಂಖ್ಯೆ 4,35,16,071ಕ್ಕೆ ಏರಿಕೆಯಾಗಿದ್ದು, ಈವರೆಗೆ 206.88 ಕೋಟಿ ಕೋವಿಡ್ ಲಸಿಕೆ ಡೋಸ್‌ಗಳನ್ನು ವಿತರಿಸಲಾಗಿದೆ.