Sunday, 15th December 2024

12,847 ಕರೋನಾ ಪ್ರಕರಣ ದೃಢ

#corona

ನವದೆಹಲಿ: ಕೋವಿಡ್ 4ನೇ ಅಲೆಯ ಆತಂಕ ನಡುವೆ ಶುಕ್ರವಾರ ಮುಕ್ತಾಯವಾದ 24 ಗಂಟೆಗಳ ಅವಧಿಯಲ್ಲಿ ಕೊಂಚ ಏರಿಕೆ ಯಾಗಿದ್ದು, 12,847ರಷ್ಟು ಕಂಡುಬಂದಿದೆ. 12,213 ಹೊಸ ಕೋವಿಡ್ ಪ್ರಕರಗಳು ದಾಖಲಾಗಿದ್ದವು.

ಕಳೆದ 24 ಗಂಟೆಗಳಲ್ಲಿ 14 ಮಂದಿ ಮೃತಪಟ್ಟಿದ್ದಾರೆ. ಕಳೆದ 24 ಗಂಟೆಗಳಲ್ಲಿ 7,985 ಮಂದಿ ಗುಣಮುಖರಾಗುವುದರೊಂದಿಗೆ ಒಟ್ಟಾರೆಯಾಗಿ 4 ಕೋಟಿಯ 26 ಲಕ್ಷದ 82 ಸಾವಿರದ 697 ಮಂದಿ ಗುಣಮುಖರಾಗಿದ್ದಾರೆ.

ದೇಶದಲ್ಲಿ ಸಕ್ರಿಯ ಕೊರೋನಾ ಸೋಂಕಿತರ ಸಂಖ್ಯೆ 63 ಸಾವಿರದ 063 ಆಗಿದೆ. ಇದುವರೆಗೆ ಸೋಂಕಿನಿಂದ ಗುಣಮುಖರಾಗಿ 4 ಕೋಟಿಯ 26 ಲಕ್ಷದ 82 ಸಾವಿರದ 697 ಮಂದಿ ಆಸ್ಪತ್ರೆಯಿಂದ ಬಿಡುಗಡೆ ಗೊಂಡಿದ್ದಾರೆ.

ದೇಶಾದ್ಯಂತ ಇಲ್ಲಿಯವರೆಗೆ 5 ಲಕ್ಷದ 24 ಸಾವಿರದ 817 ಮಂದಿ ಕೋವಿಡ್ ನಿಂದ ಮೃತಪಟ್ಟಿದ್ದಾರೆ. ಇನ್ನು ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 5,19,903 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದ್ದು, ಇದರೊಂದಿಗೆ ಈ ವರೆಗೂ 85 ಕೋಟಿಯ 69 ಲಕ್ಷ ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ರಾಷ್ಟ್ರಾದ್ಯಂತ ಕೋವಿಡ್ ಲಸಿಕೆ ಅಭಿಯಾನದಲ್ಲಿ ಇದುವರೆಗೆ 195.84 ಕೋಟಿ ಲಸಿಕೆ ಡೋಸ್ ನ್ನು ವಿತರಿಸಲಾಗಿದೆ. ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ 1,95,67,37,014 ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.