ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 128 ಹೊಸ ಕರೋನಾ ವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 1,998ಕ್ಕೆ ಇಳಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಬುಧವಾರ ತಿಳಿಸಿದೆ.
ಈ ಮೂಲಕ ಸೋಂಕಿತರ ಸಂಖ್ಯೆ 4,46,81,361ಕ್ಕೆ ಏರಿಕೆಯಾಗಿದೆ. ಕರ್ನಾಟಕ ಮತ್ತು ಮಹಾರಾಷ್ಟ್ರದಲ್ಲಿ ತಲಾ ಒಂದು ಸಾವು ಸೇರಿ ಈವರೆಗೆ 5,30,728 ಮಂದಿ ಸಾವಿಗೀಡಾಗಿದ್ದಾರೆ ಮಾಹಿತಿಯಲ್ಲಿ ತಿಳಿದುಬಂದಿದೆ.
ದೇಶದಲ್ಲಿ ಈವರೆಗೆ 4,41,48,645 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಸಚಿವಾಲಯದ ವೆಬ್ಸೈಟ್ನಲ್ಲಿನ ಮಾಹಿತಿ ಪ್ರಕಾರ, ದೇಶದಾದ್ಯಂತ ನಡೆಯುತ್ತಿರುವ ಲಸಿಕಾ ಅಭಿಯಾನದ ಅಡಿಯಲ್ಲಿ 220.18ಕ್ಕೂ ಅಧಿಕ ಕೋವಿಡ್ ವಿರುದ್ಧದ ಲಸಿಕಾ ಡೋಸ್ಗಳನ್ನು ವಿತರಿಸಲಾಗಿದೆ.