ಸೋಂಕು ನಿಯಂತ್ರಿಸುವ ಸಲುವಾಗಿ ಹಾಗೂ ಸಾರ್ವಜನಿಕರ ಸುರಕ್ಷತೆಯನ್ನು ಖಾತ್ರಿಪಡಿಸಲು ವಿವಿಯನ್ನು ಬಂದ್ ಮಾಡಲಾಗಿದೆ ಎಂದು ರಿಯಾಸಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಹೇಳಿದ್ದಾರೆ.
ಡಿ.31 ಮತ್ತು ಜನವರಿ 1 ರಂದು ವಿಶ್ವವಿದ್ಯಾಲಯದಲ್ಲಿ COVID-19 ಪರೀಕ್ಷೆ ನಡೆಸಲಾಗಿತ್ತು, ಈ ವೇಳೆ 13 ಮಂದಿ ವಿದ್ಯಾರ್ಥಿಗಳಲ್ಲಿ ಸೋಂಕು ಪತ್ತೆಯಾಗಿದೆ ಎಂದು ತಿಳಿದುಬಂದಿದೆ.
ವಿದ್ಯಾರ್ಥಿಗಳಲ್ಲಿ ಸೋಂಕು ಪತ್ತೆಯಾದ ಹಿನ್ನೆಲೆಯಲ್ಲಿ ಮುಂದಿನ ಆದೇಶದವರೆಗೆ ವಿವಿಯನ್ನು ಬಂದ್ ಮಾಡುವಂತೆ ಸೂಚನೆ ನೀಡಿದ್ದಾರೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ಶನಿವಾರ 169 ಹೊಸ ಸೋಂಕು ಪ್ರಕರಣಗಳು ದಾಖಲಾಗಿದ್ದು, ಸಾವಿನ ಸಂಖ್ಯೆ 4,530ಕ್ಕೆ ತಲುಪಿದೆ.