Thursday, 12th December 2024

1,300 ಜನರಲ್ಲಿ ಹೊಸದಾಗಿ ಸೋಂಕು ದೃಢ

covid

ವದೆಹಲಿ: ಕರೋನಾ ಸೊಂಕಿತರ ಸಂಖ್ಯೆ ಮತ್ತಷ್ಟು ಹೆಚ್ಚಳವಾಗಿದ್ದು, 24 ಗಂಟೆಯಲ್ಲಿ ಮತ್ತೆ ಸಾವಿರಕ್ಕೂ ಹೆಚ್ಚು ಜನರಲ್ಲಿ ಸೋಂಕು ಪತ್ತೆಯಾಗಿದೆ. ಕಳೆದ 24 ಗಂತೆಯಲ್ಲಿ 1,300 ಜನರಲ್ಲಿ ಹೊಸದಾಗಿ ಸೋಂಕು ದೃಢಪಟ್ಟಿದೆ.

ದೇಶದಲ್ಲಿ ಈವರೆಗೆ 5,30,816 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ದೇಶದಲ್ಲಿ 7,605 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.80 ರಷ್ಟು ಜನ ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 44,16,09,97 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ದೇಶದಲ್ಲಿ ಈವರೆಗೆ 220,65,28,710 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 89,078 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.