ನವದೆಹಲಿ: ಭಾರತದಲ್ಲಿ ಕಳೆದ 24ಗಂಟೆಯಲ್ಲಿ 13,216 ಕೋವಿಡ್ 19 ಸೋಂಕು ಪ್ರಕರಣ ದೃಢಪಟ್ಟಿದೆ.
24 ಮಂದಿ ಇದೇ ವೇಳೆ ಮೃತಪಟ್ಟಿದ್ದಾರೆ. ದೇಶಾದ್ಯಂತ ಕೋವಿಡ್ ನಿಂದ ಮೃತಪಟ್ಟವರ ಸಂಖ್ಯೆ 5,24,840ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ.
ಒಂದೇ ದಿನದಲ್ಲಿ ದೇಶದಲ್ಲಿ 5,045 ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳವಾಗಿದ್ದು, ಇದೀಗ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 68,108ಕ್ಕೆ ಏರಿಕೆಯಾಗಿದೆ. 24 ಗಂಟೆಯಲ್ಲಿ ಕೋವಿಡ್ 19 ಸೋಂಕಿನಿಂದ 8,148 ಮಂದಿ ಗುಣಮುಖ ರಾಗಿದ್ದು, ದೇಶಾದ್ಯಂತ ಕೋವಿಡ್ ನಿಂದ ಚೇತರಿಸಿ ಕೊಂಡವರ ಒಟ್ಟು ಸಂಖ್ಯೆ 4,26,90,845ಕ್ಕೆ ಹೆಚ್ಚಳವಾಗಿದೆ.
ಭಾರತದಾದ್ಯಂತ ಕೋವಿಡ್ ಲಸಿಕೆ ಅಭಿಯಾನದಡಿ ಈವರೆಗೆ 196 ಕೋಟಿ ಡೋಸ್ ಲಸಿಕೆ ನೀಡಲಾಗಿದೆ.