ನವದೆಹಲಿ: ಭಾರತದಲ್ಲಿ ಕರೋನಾ ಇಳಿಕೆ ಪ್ರಕರಣ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 1,326 ಹೊಸ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,46,53,592ಕ್ಕೆ ಏರಿಕೆಯಾಗಿದೆ.
ಕಳೆದ ಕೋವಿಡ್ ನಿಂದ ಮೃತಪಡುವವರ ಒಟ್ಟು ಸಂಖ್ಯೆ 5,29,024ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಸೋಂಕಿತರ ಸಂಖ್ಯೆ ಇಳಿಕೆ ಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 17,912ಕ್ಕೆ ಇಳಿಕೆಯಾಗಿದೆ. ಈ ನಡುವೆ ಕಳೆದ 24 ಗಂಟೆಗಳಲ್ಲಿ 1,723 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 4,41,06,656ಕ್ಕೆ ತಲುಪಿದೆ.
ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ 2,19,63,82,882 ಜನರಿಗೆ ಲಸಿಕೆ ನೀಡಲಾಗಿದೆ ಎಂದು ತಿಳಿಸಿದೆ.