Wednesday, 11th December 2024

13,734 ಹೊಸ ಕೋವಿಡ್ ಪ್ರಕರಣ ಪತ್ತೆ

#corona

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 13,734 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 4,40,50,009ಕ್ಕೆ ಏರಿಕೆ ಯಾಗಿದೆ.

ಇದೇ ಅವಧಿಯಲ್ಲಿ 27 ಜನರು ಸೋಂಕಿನಿಂದ ಸಾವಿಗೀಡಾಗಿದ್ದು, ಈವರೆಗೆ 5,26,430 ಜನರು ಮೃತಪಟ್ಟಿದ್ದಾರೆ. ಸದ್ಯ 1,39,792 ಸಕ್ರಿಯ ಪ್ರಕರಣಗಳಿದ್ದು, ಒಟ್ಟು ಸೋಂಕು ಪ್ರಕಣಗಳ ಪೈಕಿ ಶೇ 0.32ರಷ್ಟಿದೆ.

ದೈನಂದಿನ ಪಾಸಿಟಿವಿಟಿ ದರ ಶೇ 3.34ರಷ್ಟಿದ್ದರೆ, ವಾರದ ಪಾಸಿಟಿವಿಟಿ ದರ ಶೇ 4.79 ರಷ್ಟಿದೆ.

ಲಸಿಕೆ ಅಭಿಯಾನದ ಅಡಿಯಲ್ಲಿ ಈವರೆಗೆ ದೇಶದಲ್ಲಿ 204.6 ಕೋಟಿ ಕೋವಿಡ್ ಲಸಿಕೆ ಡೋಸ್‌ಗಳನ್ನು ವಿತರಿಸಲಾಗಿದೆ ಎಂದು ಸಚಿವಾಲಯದ ಅಂಕಿಅಂಶಗಳಿಂದ ತಿಳಿದುಬಂದಿದೆ.