Saturday, 23rd November 2024

ರಾಜ್ ಕುಂದ್ರಾಗೆ 14 ದಿನ ನ್ಯಾಯಾಂಗ ಬಂಧನ

ಮುಂಬೈ: ನೀಲಿ ಸಿನಿಮಾ ನಿರ್ಮಾಣ ಪ್ರಕರಣದಡಿ ಬಂಧನಕ್ಕೊಳಗಾಗಿರುವ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ಅವರಿಗೆ 14 ದಿನಗಳ ವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಬಾಂಬೆ ಹೈಕೋರ್ಟ್‌ ಆದೇಶಿಸಿದೆ.

ಈ ಹಿಂದೆ ಪೊಲೀಸ್ ಕಸ್ಟಡಿಗೆ ನೀಡಲಾಗಿದ್ದ ಅವಧಿ ಇಂದಿಗೆ ಮುಕ್ತಾಯವಾದ ಹಿನ್ನೆಲೆಯಲ್ಲಿ ಆರೋಪಿ ಕುಂದ್ರಾನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಈ ವೇಳೆ, ಮುಂದಿನ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ನ್ಯಾಯಾಲಯ ಅದೇಶ ಹೊರಡಿಸಿತು. ಜಾಮೀನಿಗೆ ಆಗ್ರಹಿಸಿದ ರಾಜ್ ಪರ ವಕೀಲು ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದು, ನಾಳೆ ನಡೆಯಲಿದೆ.

ಪ್ರಕರಣದಡಿ ಬಂಧನಕ್ಕೆ ಒಳಗಾಗಿರುವ ಮತ್ತೊಬ್ಬ ಆರೋಪಿ ರಿಯಾನ್ ಥಾರ್ಪ್ ನನ್ನೂ 14 ದಿನಗಳ ವರೆಗೆ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಕಳೆದ ಎರಡು ದಿನಗಳ ಹಿಂದೆಯಷ್ಟೇ ನಟಿ ಶಿಲ್ಪಾ ಶೆಟ್ಟಿಯನ್ನೂ ವಿಚಾರಣೆಗೆ ಒಳಪಡಿಸಲಾಗಿತ್ತು.