Saturday, 14th December 2024

ನವೀಕರಣಗೊಂಡ ಸೇತುವೆ ಕುಸಿತ: ಮೃತರ ಸಂಖ್ಯೆ 141ಕ್ಕೆ ಏರಿಕೆ

ಗುಜರಾತ್: ಗುಜರಾತ್‌ನ ಮೊರ್ಬಿಯಲ್ಲಿ ಬ್ರಿಟಿಷರ ಕಾಲದ ಸೇತುವೆಯೊಂದು ನವೀಕರಣಗೊಂಡ ಒಂದು ವಾರದ ನಂತರ ಮುರಿದು ಬಿದ್ದು ದುರಂತ ಸಂಭವಿಸಿತ್ತು. ಘಟನೆಯಿಂದಾಗಿ ಸಾವಿನ ಸಂಖ್ಯೆ ಇದೀಗ 141ಕ್ಕೆ ಏರಿಕೆಯಾಗಿದೆ.

ಅಹಮದಾಬಾದ್‌ನಿಂದ 200 ಕಿಮೀ ದೂರದಲ್ಲಿರುವ ತೂಗು ಸೇತುವೆ ಬಿದ್ದಿದ್ದು, ಛಾತ್ ಪೂಜೆಗೆ ಸಂಬಂಧಿಸಿದಂತೆ ಕೆಲವು ಆಚರಣೆಗಳನ್ನು ಮಾಡಲು ಸುಮಾರು 500 ಜನರು ಅದರ ಮೇಲೆ ಜಮಾಯಿಸಿದ್ದ ವೇಳೆ ಈ ಘಟನೆ ನಡೆದಿದೆ.

ಮಚ್ಚು ನದಿಯ ನೀರಿನಲ್ಲಿ ನೂರಾರು ಜನರು ಇನ್ನೂ ಸಿಕ್ಕಿ ಬಿದ್ದಿದ್ದಾರೆ. ದಡವನ್ನು ತಲುಪಲು ಪ್ರಯತ್ನಿಸುತ್ತಿದ್ದಾರೆ. ಮೃತರಲ್ಲಿ ಹೆಚ್ಚಿನವರು ಮಹಿಳೆಯರು ಮತ್ತು ಮಕ್ಕಳು ಎಂದು ಸ್ಥಳೀಯರು ಹೇಳುತ್ತಾರೆ.