ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 14,148 ಕೋವಿಡ್ ಪ್ರಕರಣಗಳು ವರದಿಯಾಗಿವೆ. 302 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ.
ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 4,28,81,179 ಕ್ಕೆ ಏರಿಕೆಯಾಗಿದೆ. ಆ ಪೈಕಿ 5,12,924 ಮಂದಿ ಮೃತಪಟ್ಟಿದ್ದಾರೆ. ಚೇತರಿಕೆ ಪ್ರಮಾಣ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಇದುವರೆಗೆ 4,22,19,896 ಮಂದಿ ಗುಣಮುಖರಾಗಿದ್ದಾರೆ. ಸದ್ಯ ದೇಶದಲ್ಲಿ 1,48,359 ಸಕ್ರಿಯ ಪ್ರಕರಣಗಳಿವೆ. ದೇಶದಲ್ಲಿ ಇದುವರೆಗೆ 1,76,52,31,385 ಕೋಟಿ ಡೋಸ್ ಕೋವಿಡ್ ಲಸಿಕೆ ಹಾಕಲಾಗಿದೆ.