Thursday, 12th December 2024

230 ಪರಿಹಾರ ಕೇಂದ್ರಗಳಿಗೆ 14,000 ಮಂದಿಯ ಸ್ಥಳಾಂತರ: ನರೋತ್ತಮ್‌ ಮಿಶ್ರಾ

ಭೋಪಾಲ್: ಪ್ರವಾಹ ಪೀಡಿತ ಜಿಲ್ಲೆಗಳಲ್ಲಿ ಸುಮಾರು 14,000 ಮಂದಿಯನ್ನು 230 ಪರಿಹಾರ ಕೇಂದ್ರಗಳಿಗೆ ಸ್ಥಳಾಂತರಿಸಲಾಗಿದೆ’ ಎಂದು ರಾಜ್ಯದ ಗೃಹ ಸಚಿವ ನರೋತ್ತಮ್‌ ಮಿಶ್ರಾ ತಿಳಿಸಿ ದ್ದಾರೆ.

ಮಧ್ಯಪ್ರದೇಶದಲ್ಲಿ ಪ್ರವಾಹ ಪರಿಸ್ಥಿತಿ ಸುಧಾರಿಸಿದ ಕಾರಣ ಭಾನುವಾರ ಯಾವುದೇ ರಕ್ಷಣಾ ಕಾರ್ಯಾಚರಣೆಯನ್ನು ಕೈಗೊಂಡಿಲ್ಲ ಎಂದರು.

ಮೊರೆನಾ, ಶಿವಪುರಿ, ಅಶೋಕ ನಗರ ಮತ್ತು ಶಿಯೋಪುರ್ ಜಿಲ್ಲೆಗಳಲ್ಲಿ ಭಾನುವಾರ ಮಳೆ ಯಾಗುವ ಸಾಧ್ಯತೆಗಳಿವೆ ಎಂಬುದಾಗಿ ಹವಾಮಾನ ಇಲಾಖೆ ಹೇಳಿದೆ’ ಎಂದು ಮಿಶ್ರಾ ತಿಳಿಸಿದರು. ಕೇಂದ್ರ ನಾಗರಿಕ ವಿಮಾನಯಾನ ಸಚಿವ ಜೋತಿರಾದಿತ್ಯ ಸಿಂಧಿಯಾ ಅವರು ಭಾನುವಾರ ಬೆಳಿಗ್ಗೆ ಗ್ವಾಲಿಯರ್‌- ಚಂಬಲ್‌ ಪ್ರದೇಶದಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದರು.

ಈ ಪ್ರದೇಶದಲ್ಲಿ ಕಳೆದ 40 ವರ್ಷಗಳಲ್ಲಿ ಇಷ್ಟು ಪ್ರಮಾಣದಲ್ಲಿ ಹಾನಿ ಉಂಟಾಗಿಲ್ಲ. ಪರಿಸ್ಥಿತಿಯನ್ನು ಎದುರಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಂಟಿ ಯಾಗಿ ಕೆಲಸ ಮಾಡುತ್ತಿವೆ. ಈವರೆಗೆ 15,000 ಮಂದಿಯನ್ನು ರಕ್ಷಿಸಲಾಗಿದೆ. ಪರಿಹಾರ ಕಾರ್ಯವೂ ಭರದಿಂದ ಸಾಗಿದೆ’ ಎಂದರು.

‘ಪ್ರವಾಹ ಪೀಡಿತ ಜಿಲ್ಲೆಗಳಿಗೆ ಪರಿಹಾರ ಸಾಮಾಗ್ರಿಗಳನ್ನು ಕಳುಹಿಸಲಾಗಿದೆ. ಪ್ರವಾಹ ಪರಿಸ್ಥಿತಿ ಮೇಲೆ ಸರ್ಕಾರ ನಿಗಾ ಇಟ್ಟಿದೆ ಎಂದು ಅವರು ಹೇಳಿದರು.