Sunday, 15th December 2024

15 ದಿನ ಲಾಕ್‌ಡೌನ್‌ ವಿಸ್ತರಣೆ: ರಾಜೇಶ್ ಟೊಪೆ

ಮುಂಬೈ: ಮಹಾರಾಷ್ಟ್ರದಲ್ಲಿ ಲಾಕ್‌ಡೌನ್‌ ಅನ್ನು ಏ.30ರ ಬಳಿಕವೂ 15 ದಿನ ವಿಸ್ತರಿಸಲಾಗುವುದು ಎಂದು ಆರೋಗ್ಯ ಸಚಿವ ರಾಜೇಶ್ ಟೊಪೆ ಬುಧವಾರ ಹೇಳಿದ್ದಾರೆ.

ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಭಾಗಿಯಾದ ಎಲ್ಲರೂ ಲಾಕ್‌ಡೌನ್ ವಿಸ್ತರಿಸುವ ಬಗ್ಗೆ ಒಲವು ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

ಕೋವಿಡ್ ಪ್ರಕರಣಗಳು ವಿಪರೀತವಾಗಿ ಹೆಚ್ಚುತ್ತಿರುವ ಕಾರಣ ಮಹಾರಾಷ್ಟ್ರ ಸರ್ಕಾರವು ಏಪ್ರಿಲ್ 4ರಿಂದ ವಾರಾಂತ್ಯ ಲಾಕ್‌ ಡೌನ್‌ ಮತ್ತು ವಾರದ ದಿನಗಳಲ್ಲಿ ರಾತ್ರಿ ಸಂಚಾರ ನಿರ್ಬಂಧಿಸಿ ಆದೇಶ ಹೊರಡಿಸಿತ್ತು. ಖಾಸಗಿ ಕಚೇರಿಗಳು, ಸಲೂನ್‌ಗಳು, ಚಿತ್ರ ಮಂದಿರಗಳನ್ನು ಮುಚ್ಚುವಂತೆ ಸೂಚಿಸಿತ್ತು.

ಸದ್ಯ ವಾರಾಂತ್ಯ ಲಾಕ್‌ಡೌನ್ ಶುಕ್ರವಾರ ರಾತ್ರಿ 8 ಗಂಟೆಗೆ ಆರಂಭಗೊಂಡು ಸೋಮವಾರ ಬೆಳಿಗ್ಗೆ 7 ಗಂಟೆವರೆಗೆ ಜಾರಿಯಲ್ಲಿದೆ.