Sunday, 1st December 2024

Accident News : ಸಾರಿಗೆ ಬಸ್‌; ಟ್ರಕ್‌ ನಡುವೆ ಅಪಘಾತ, 15 ಮಂದಿ ಸಾವು, ಹಲವರಿಗೆ ಗಾಯ

Accident News

ನವದೆಹಲಿ: ಉತ್ತರ ಪ್ರದೇಶ ರಾಜ್ಯದ ಹತ್ರಾಸ್‌ನಲ್ಲಿ ಶುಕ್ರವಾರ ನಡೆದ ಸಾರಿಗೆ ಬಸ್ ಮಿನಿ ಟ್ರಕ್‌ ನಡುವಿನ ಅಪಘಾತದಲ್ಲಿ (Accident News) ಕನಿಷ್ಠ 15 ಮಂದಿ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಹಲವಾರು ಮಂದಿ ಗಾಯಗೊಂಡಿದ್ದಾರೆ. ರಾಷ್ಟ್ರೀಯ ಹೆದ್ದಾರಿ 93ರಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಸ್‌ ಪ್ರಯಾಣಿಕರು ಹತ್ರಾಸ್‌ನಿಂದ ಆಗ್ರಾಕ್ಕೆ ತೆರಳುತ್ತಿದ್ದರು. ಮಿನಿ ಟ್ರಕ್ ನಲ್ಲಿದ್ದವರು ಊಟ ಮಾಡಿದ ನಂತರ ಸೆವಾಲಾ ಗ್ರಾಮಕ್ಕೆ ಮರಳುತ್ತಿದ್ದರು.

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಅಪಘಾತದ ಬಗ್ಗೆ ತಿಳಿದು ಸಂತಾಪ ಸೂಚಿಸಿದ್ದಾರೆ. ಪರಿಹಾರ ಕಾರ್ಯಗಳನ್ನು ತ್ವರಿತಗೊಳಿಸುವಂತೆ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಅಪಘಾತದ ನಂತರ ಜಿಲ್ಲಾ ಮ್ಯಾಜಿಸ್ಟ್ರೇಟ್ ಮತ್ತು ಪೊಲೀಸ್ ವರಿಷ್ಠಾಧಿಕಾರಿ ಜಿಲ್ಲಾ ಆಸ್ಪತ್ರೆಗೆ ತಲುಪಿ ಪರಿಶೀಲನೆ ನಡೆಸುತ್ತಿದ್ದಾರೆ. ಆಗ್ರಾ-ಅಲಿಗಢ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಸ್ ಬೇರೊಂದು ವಾಹನವನ್ನು ಓವರ್‌ಟೇಕ್‌ ಮಾಡಲು ಪ್ರಯತ್ನಿಸುತ್ತಿದ್ದಾಗ ವ್ಯಾನ್ ಗೆ ಡಿಕ್ಕಿ ಹೊಡೆದಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ನಿಪುನ್ ಅಗರ್ವಾಲ್ ತಿಳಿಸಿದ್ದಾರೆ. ಗಾಯಗೊಂಡವರಲ್ಲಿ ನಾಲ್ವರ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದೆ.

Director Nagashekhar: ನಿರ್ದೇಶಕ ನಾಗಶೇಖರ್ ಕಾರು ಅಪಘಾತ; ಮಹಿಳೆಗೆ ಗಾಯ

ಬೆಂಗಳೂರು: ಸಂಜು ವೆಡ್ಸ್ ಗೀತಾ ಸೇರಿ ಹಲವು ಖ್ಯಾತ ಸಿನಿಮಾಗಳ ನಿರ್ದೇಶನ ಮಾಡಿರುವ ನಿರ್ದೇಶಕ ನಾಗಶೇಖರ್ (Director Nagashekhar) ಅವರ ಕಾರು ಶುಕ್ರವಾರ ಅಪಘಾತಕ್ಕೀಡಾಗಿದೆ. ಕಾರು ವೇಗವಾಗಿ ಬಂದು ನಿಯಂತ್ರಣ ಕಳೆದುಕೊಂಡು ಮರಕ್ಕೆ ಗುದ್ದಿದ್ದು, ಈ ವೇಳೆ ಮಹಿಳೆಯೊಬ್ಬರು ಗಾಯಗೊಂಡಿದ್ದಾರೆ.

ನಗರದ ಜ್ಞಾನಭಾರತಿ ಆವರಣದಲ್ಲಿ ಶುಕ್ರವಾರ ಮಧ್ಯಾಹ್ನ ಅಪಘಾತ ನಡೆದಿದೆ. ಕಾರು ನಿಯಂತ್ರಣ ಕಳೆದುಕೊಂಡು ಮರಕ್ಕೆ ಡಿಕ್ಕಿಯಾಗುವ ಮೊದಲು ಮಹಿಳೆಯೊಬ್ಬರಿಗೆ ಗುದ್ದಿದೆ. ನಂತರ ನಿರ್ದೇಶಕ ನಾಗಶೇಖರ್ ಕಾರನ್ನು ಅಲ್ಲೇ ಬಿಟ್ಟು, ಮತ್ತೊಬ್ಬರ ಬೈಕ್‌ನಲ್ಲಿ ಹೋಗಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: Fraud Case: ಯುವತಿಯ ಕರೆಗೆ ಓಗೊಟ್ಟು ಹೋಟೆಲ್‌ಗೆ ಹೋದ ಯುವಕ; ಮುಂದೆ ನಡೆದದ್ದೇ ಬೇರೆ…

ಘಟನಾ ಸ್ಥಳಕ್ಕೆ ಪೊಲೀಸರು ತೆರಳಿ ಪರಿಶೀಲನೆ ನಡೆಸಿದ್ದು, ಅಕ್ಕಪಕ್ಕದ ಸಿಸಿ ಕ್ಯಾಮೆರಾಗಳನ್ನು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ವೇಗವಾಗಿ ಬಂದ ಬೆಂಜ್‌ ಕಾರು ಮಹಿಳೆಯೊಬ್ಬರಿಗೆ ಡಿಕ್ಕಿಯಾಗಿ ನಂತರ ನಿಯಂತ್ರಣ ತಪ್ಪಿಮರಕ್ಕೆ ಗುದ್ದಿದೆ ಎಂದು ತಿಳಿದುಬಂದಿದ್ದು, ಸದ್ಯ ಕಾರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ನಿರ್ದೇಶಕ ನಾಗಶೇಖರ್,​ ಕಾರು ನಿಯಂತ್ರಣ ತಪ್ಪಿ ಫುಟ್ ಪಾತ್ ಮೇಲೆ ಹತ್ತಿದೆ. ಅದೃಷ್ಟವಶಾತ್ ಏನೂ ಆಗಿಲ್ಲ.ನಾನು ಚೆನ್ನಾಗಿಯೇ ಇದ್ದೇನೆ ಎಂದು ಹೇಳಿದ್ದಾರೆ.