Sunday, 8th September 2024

ಎಲ್‌ಪಿಜಿ ಸಿಲಿಂಡರ್ ಸ್ಫೋಟ: 15 ಜನರಿಗೆ ಗಾಯ

ಮುಂಬೈ: ಮುಂಬೈನ ಧಾರಾವಿ ಕೊಳಗೇರಿಯಲ್ಲಿ ಭಾನುವಾರ ಎಲ್‌ಪಿಜಿ ಸಿಲಿಂಡರ್ ಸ್ಫೋಟಗೊಂಡು, ಘಟನೆಯಲ್ಲಿ 15 ಜನರು ಗಾಯಗೊಂಡಿದ್ದು, ಐವರ ಸ್ಥಿತಿ ಗಂಭೀರವಾಗಿದೆ.

ಘಟನೆಯಲ್ಲಿ ಗಾಯಗೊಂಡ ಐದು ಜನರಲ್ಲಿ ಒಬ್ಬ ಬಾಲಕ ಮತ್ತು ಇಬ್ಬರು ಮಹಿಳೆಯರು ಇದ್ದಾರೆ ಎಂದು ಅಗ್ನಿಶಾಮಕ ದಳದ ಅಧಿಕಾರಿ ತಿಳಿಸಿದ್ದಾರೆ.

ಮಧ್ಯಾಹ್ನ ಕೊಳಗೇರಿಯ ಶಾಹು ನಗರ ಪ್ರದೇಶದಲ್ಲಿ ದುರ್ಘಟನೆ ಸಂಭವಿಸಿದೆ. ಒಂದು ಗುಡಿಸಲಿನ ಹೊರಗೆ ಇಟ್ಟಿದ್ದ ಎಲ್‌ಪಿಜಿ ಸಿಲಿಂಡರ್ ಸ್ಫೋಟಗೊಂಡಿದೆ ಮತ್ತು ಇತರೆಡೆಗೆ ಬೆಂಕಿ ಆವರಿಸಿದೆ. ಘಟನೆಯಲ್ಲಿ 15 ಜನರು ಗಾಯಗೊಂಡಿದ್ದು, ಗಾಯಾಳುಗಳನ್ನು ಸಮೀಪದ ಸಿಯಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಆಗಮಿಸಿದ 3 ಅಗ್ನಿಶಾಮಕ ವಾಹನಗಳು ಬೆಂಕಿಯನ್ನು ನಿಯಂತ್ರಣಕ್ಕೆ ತಂದಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಗಾಯಗೊಂಡ 15 ಜನರಲ್ಲಿ ಐದು ಜನರ ಪರಿಸ್ಥಿತಿ ಗಂಭೀರವಾಗಿದ್ದು, ಶೇ 50 ರಿಂದ 60ರಷ್ಟು ಸುಟ್ಟಗಾಯ ಗಳಿಂದ ಬಳಲುತ್ತಿದ್ದಾರೆ. ಏಳು ಜನ ಪುರುಷರು ಮತ್ತು ಮೂವರು ಮಹಿಳೆಯರು ಅಪಾಯದಿಂದ ಪಾರಾಗಿ ದ್ದಾರೆ.

ಸಿಲಿಂಡರ್‌ನಿಂದ ಅನಿಲ ಸೋರಿಕೆಯಾಗುತ್ತಿದ್ದು, ಅದಕ್ಕಾಗಿಯೇ ಗುಡಿಸಲಿನಿಂದ ಹೊರಗಿಡಲಾಗಿತ್ತು ಎಂಬು ದನ್ನು ಅಗ್ನಿಶಾಮಕ ದಳದ ಸಿಬ್ಬಂದಿ ತನಿಖೆಯ ವೇಳೆ ಕಂಡುಕೊಂಡಿದ್ದಾರೆ. 

Leave a Reply

Your email address will not be published. Required fields are marked *

error: Content is protected !!