Sunday, 15th December 2024

150 ಮಹಾರಾಷ್ಟ್ರ ನವನಿರ್ಮಾಣ ಸೇನಾ ಕಾರ್ಯಕರ್ತರ ಬಂಧನ

ನಾಸಿಕ್: ಜಿಲ್ಲೆಯಲ್ಲಿ ಕೋಮು ಉದ್ವಿಗ್ನತೆ ಸೃಷ್ಟಿಸಿದ್ದಕ್ಕಾಗಿ ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯಲ್ಲಿ ಒಟ್ಟು 150 ಮಹಾರಾಷ್ಟ್ರ ನವನಿರ್ಮಾಣ ಸೇನಾ ಪಕ್ಷದ ಕಾರ್ಯಕರ್ತರನ್ನು ಬಂಧಿಸಲಾಗಿದೆ.

ಮಸೀದಿಗಳ ಹೊರಗೆ ಧ್ವನಿವರ್ಧಕದಲ್ಲಿ ಹನುಮಾನ್ ಚಾಲೀಸಾ ನುಡಿಸುವಂತೆ ಎಂಎನ್‌ಎಸ್ ಮುಖ್ಯಸ್ಥ ರಾಜ್ ಠಾಕ್ರೆ ಅವರ ಮನವಿಯ ಮಧ್ಯೆ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ರಾಜ್ಯ ಪೊಲೀಸರು ಕೈಗೊಂಡಿರುವ ‘ತಡೆಗಟ್ಟುವ ಕ್ರಮಗಳ’ ಭಾಗವಾಗಿ ಬಂಧನಗಳು ನಡೆದಿವೆ.

ನಾಸಿಕ್‌ನಲ್ಲಿ ಕೋಮುಗಲಭೆ ಸೃಷ್ಟಿಸಿದ್ದಕ್ಕಾಗಿ ಇದುವರೆಗೆ 150 ಎಂಎನ್‌ಎಸ್ ಕಾರ್ಯಕರ್ತರನ್ನು ಬಂಧಿಸಲಾಗಿದೆ. ಕಾನೂನು ಮತ್ತು ಸುವ್ಯವಸ್ಥೆ ಪರಿಸ್ಥಿತಿಯನ್ನು ಕಾಪಾಡಲು ಎಲ್ಲಾ ಸೂಕ್ಷ್ಮ ಸ್ಥಳ ಗಳಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ ಎಂದು ನಾಸಿಕ್ ಇನ್‌ಸ್ಪೆಕ್ಟರ್ ಪಾಟೀಲ್ ಹೇಳಿದ್ದಾರೆ.

ಐಜಿಪಿ ಮಾತನಾಡಿ, ‘ಕಾನೂನು ರೂಪಿಸಿರುವ ನಿಯಮಗಳ ಪ್ರಕಾರವೇ ಕ್ರಮಕೈಗೊಳ್ಳುತ್ತಿದ್ದೇವೆ, ಅಧಿಕಾರಿಗಳ ಅನುಮತಿ ಪಡೆಯದೆ ಧ್ವನಿವರ್ಧಕ ಕಾರ್ಯನಿರ್ವಹಿಸುತ್ತಿದ್ದರೆ ಅಂತಹವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು’ ಎಂದರು.

ರಾಜ್ ಠಾಕ್ರೆ, ಸರ್ಕಾರ ಧ್ವನಿವರ್ಧಕ ತೆಗೆದು ಹಾಕುವವರೆಗೆ ಮತ್ತು ಧ್ವನಿವರ್ಧಕಗಳ ಕುರಿತು ಸುಪ್ರೀಂ ಕೋರ್ಟ್ ಸಮಸ್ಯೆಯನ್ನು ಪರಿಹರಿಸುವವರೆಗೆ ಮಸೀದಿಗಳ ಹೊರಗೆ ಹನುಮಾನ್ ಚಾಲೀಸಾವನ್ನು ಹಾಕಲಾವುದು ಎಂದು ಹೇಳಿದರು.

ಮುಂಬೈನಲ್ಲಿ 1,140ಕ್ಕೂ ಹೆಚ್ಚು ಮಸೀದಿಗಳಿವೆ. ಇವುಗಳಲ್ಲಿ 135 ಮಸೀದಿಗಳು ಮಾರ್ಗಸೂಚಿಗಳನ್ನು ಉಲ್ಲಂಘಿಸಿ ಅಜಾನ್ ನುಡಿಸಿದವು. ನಮ್ಮ ಕಾರ್ಯಕರ್ತರು ಹಾಗೂ ನನ್ನ ಉದ್ದೇಶವೆಂದರೆ ಎಲ್ಲಾ ಅಕ್ರಮ ಧ್ವನಿವರ್ಧಕಗಳನ್ನು ಮಸೀದಿಗಳಿಂದ ತೆಗೆದುಹಾಕಬೇಕು. ಅವುಗಳನ್ನು ತೆಗೆದುಹಾಕುವವರೆಗೆ ನಾವು ನಮ್ಮ ಪ್ರತಿಭಟನೆಯನ್ನು ಮುಂದುವರಿಸುತ್ತೇವೆ ಎಂದು ರಾಜ್ ಠಾಕ್ರೆ ಹೇಳಿದರು.