Wednesday, 27th November 2024

15,102 ಕೋವಿಡ್‌ ಪ್ರಕರಣ ದೃಢ

#corona

ನವದೆಹಲಿ: ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ 15,102 ಕೋವಿಡ್‌ ಪ್ರಕರಣಗಳು ವರದಿಯಾಗಿವೆ. 278 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 4,28,67,031ಕ್ಕೆ ಏರಿಕೆಯಾಗಿದೆ. ಆ ಪೈಕಿ 5,12,622 ಮಂದಿ ಮೃತಪಟ್ಟಿದ್ದಾರೆ. ಚೇತರಿಕೆ ಪ್ರಮಾಣ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಇದುವರೆಗೆ 4,21,89,887 ಮಂದಿ ಗುಣಮುಖರಾಗಿದ್ದಾರೆ. ಸದ್ಯ ದೇಶದಲ್ಲಿ 1,64,522 ಸಕ್ರಿಯ ಪ್ರಕರಣಗಳಿವೆ.