Wednesday, 9th October 2024

1,549 ಕೋವಿಡ್ ಪ್ರಕರಣಗಳು ಪತ್ತೆ

#corona

ನವದೆಹಲಿ: ಭಾರತದಲ್ಲಿ ಮಹಾಮಾರಿ ಕರೋನಾ 3ನೇ ಅಲೆ ಅಂತ್ಯದತ್ತ ಸಾಗಿದ್ದು, ಸೋಮವಾರ ಬೆಳಿಗ್ಗೆ ಅಂತ್ಯವಾದ 24 ಗಂಟೆಗಳ ಅವಧಿಯಲ್ಲಿ ಕೇವಲ 1,549 ಕೋವಿಡ್ ಪ್ರಕರಣಗಳು ಪತ್ತೆಯಾಗಿ, 31 ಮಂದಿ ಮೃತಪಟ್ಟಿದ್ದಾರೆ.

ಇದರೊಂದಿಗೆ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,30,09,390ಕ್ಕೆ ಏರಿಕೆಯಾಗಿದೆ. ಅಲ್ಲದೇ, ಮೃತಪಟ್ಟವರ ಸಂಖ್ಯೆ 5,16,312ಕ್ಕೆ ಏರಿಕೆಯಾಗಿದೆ. ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 25,106ಕ್ಕೆ ಇಳಿಕೆ ಯಾಗಿದೆ.

ಈ ನಡುವೆ ಕಳೆದ 24 ಗಂಟೆಗಳಲ್ಲಿ 3,196 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 4,24,65,122ಕ್ಕೆ ತಲುಪಿದೆ.

ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ 1,81,24,97,303 ಜನರಿಗೆ ಲಸಿಕೆ ನೀಡಲಾಗಿದೆ ಎಂದು ತಿಳಿಸಿದೆ.