ನವದೆಹಲಿ: ಭಾರತದಲ್ಲಿ ಕರೋನಾ 3ನೇ ಅಲೆ ಅಂತ್ಯದತ್ತ ಸಾಗಿದೆ. ದೇಶದಲ್ಲಿ ಮಂಗಳವಾರ ಅಂತ್ಯವಾದ 24 ಗಂಟೆಗಳ ಅವಧಿಯಲ್ಲಿ ಕೇವಲ 1,581 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 33 ಮಂದಿ ಮೃತಪಟ್ಟಿದ್ದಾರೆ.
ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,30,10,971ಕ್ಕೆ ಏರಿಕೆಯಾಗಿದೆ. ಅಲ್ಲದೇ, ಕೋವಿಡ್ ನಿಂದ ಮೃತಪಟ್ಟವರ ಸಂಖ್ಯೆ 5,16,543ಕ್ಕೆ ಏರಿಕೆಯಾಗಿದೆ. ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 23,913ಕ್ಕೆ ಇಳಿಕೆಯಾಗಿದೆ
ಕಳೆದ 24 ಗಂಟೆಗಳಲ್ಲಿ 2,652 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 4,24,67,774ಕ್ಕೆ ತಲುಪಿದೆ. ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ 1,81,56,01,944 ಜನರಿಗೆ ಲಸಿಕೆ ನೀಡಲಾಗಿದೆ ಎಂದು ತಿಳಿಸಿದೆ.